ರಾಜ್ಯ

ವಕ್ಫ್ ಆಸ್ತಿ ದುರ್ಬಳಕೆ: ಮುಂದಿನ ಅಧಿವೇಶನದಲ್ಲಿ ಲೋಕಾಯುಕ್ತ ಮಧ್ಯಂತರ ವರದಿ ಮಂಡನೆ 

Srinivas Rao BV

ಬೆಂಗಳೂರು:  ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆಯ ಮಧ್ಯಂತರ ವರದಿಯನ್ನು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಮತ್ತು ಜವಳಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಕ್ಫ್ ಆಸ್ತಿಗಳ  ದುರ್ಬಳಕೆ ಹಾಗೂ ಒತ್ತುವರಿ ಬಗ್ಗೆ ಅನ್ವರ್ ಮಾಣಿಪ್ಪಾಡಿ ವರದಿಯನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಮಧ್ಯಂತರ ವರದಿ ಸಲ್ಲಿಸಿದ್ದು, ಈ ವರದಿಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಪವಿತ್ರ ಹಜ್ ಯಾತ್ರೆಯ ಕುರಿತು ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ 2020ರ ಯಾತ್ರೆಗೆ ಆಯ್ಕೆಯಾದ ಯಾತ್ರಾರ್ಥಿಗಳು ತಮ್ಮ ಮುಂಗಡ ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ.

SCROLL FOR NEXT