ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಂಧನ 

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ವಳಚಿಲ್ ನಿವಾಸಿ  ಲವಕುಮಾರ್ ಅಲಿಯಾಸ್ ಶ್ರವಣ್ ಎಂದು ಗುರುತಿಸಲಾಗಿದೆ.

ಶ್ರವಣ್ ತೊಕ್ಕೊಟ್ಟುವಿನ ಫಾಸ್ಟ್ ಫುಡ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಮಾಲೀಕರ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ಅತ್ಯಾಚಾರಕ್ಕೊಳಗಾದ .16 ವರ್ಷದ ಯುವತಿ ಇದೀಗ ಗರ್ಭವತಿಯಾಗಿದ್ದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿಯ ತಾಯಿ ತೊಕ್ಕೊಟ್ಟು ಬಳಿ ಫಾಸ್ಟ್ ಫುಡ್ ಕ್ಯಾಂಟೀನ್ ಹೊಂದಿದ್ದಾರೆ. ಅವರು ಕೆಲ ಸಂಬಂಧಿಗಳ ಸಂಪರ್ಕಕ್ಕೆ ಬಂದಿದ್ದ ಲವಕುಮಾರ್ ನನ್ನು ಕ್ಯಾಂಟೀನ್‌ನಲ್ಲಿ ಕೆಲಸ ಮಾಡಲು ನೇಮಿಸಿಕೊಂಡಿದ್ದರು. ರಾತ್ರಿ ವೇಳೆ ಆತ ಮಾಲೀಕರ ಮನೆಯಲ್ಲೇ ಉಳಿಯುತ್ತಿದ್ದ. ಈ ಸಂದರ್ಭಗಳಲ್ಲಿ, ಅವನು ಯುವತಿಯ ಜತೆ ಗೆಳೆತನ ಬೆಳೆಸಿದ್ದ. ಆಕೆ ಇಟ್ಟಿದ್ದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

90ಕ್ಕೂ ಹೆಚ್ಚು ಗುಣಮಟ್ಟದ ಪರೀಕ್ಷೆ ನಡೆಸುತ್ತೇವೆ; ‘Bromate ನಿಗದಿತ ಮಿತಿಯಲ್ಲಿದೆ, ನಮ್ಮ ಕುಡಿಯುವ ನೀರು ಸುರಕ್ಷಿತ’: FSSAI ಕ್ರಮದ ಬೆನ್ನಲ್ಲೇ Bisleri ಸ್ಪಷ್ಟನೆ..!

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿಯಿಂದ ಬಿಗಡಾಯಿಸಿದ "ಆಶಾ" ಆರೋಗ್ಯ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ 17 ಕಾರ್ಯಕರ್ತೆಯರು

Gold Price: ಚಿನ್ನ, ಬೆಳ್ಳಿ ಬೆಲೆ ದಿಢೀರ್ ಭಾರಿ ಏರಿಕೆ; ಬೆಲೆ ವಿವರಗಳು ಇಂತಿವೆ...

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!