ರಾಜ್ಯ

ಜೂ.18ಕ್ಕೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ಸರ್ವ ಸಿದ್ಧತೆ

Sumana Upadhyaya

ಬೆಂಗಳೂರು: ಇದೇ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ರಾಜ್ಯಾದ್ಯಂತ ಒಟ್ಟು 1 ಲಕ್ಷದ 016 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬ್ಲಾಕ್ ಗಳನ್ನು ಪರೀಕ್ಷಾ ಕೇಂದ್ರಗಳಾಗಿ ಸ್ಥಾಪಿಸಲಾಗುತ್ತದೆ ಎಂದು ಪಿಯುಸಿ ಶಿಕ್ಷಣ ಇಲಾಖೆ ತಿಳಿಸಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸರ್ ಗಳಿಂದ ಸ್ವಚ್ಛಗೊಳಿಸಲಾಗಿದೆ. ಸುಮಾರು 18 ಸಾವಿರದ 524 ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿದ್ದು ವಲಸೆ ಕಾರ್ಮಿಕರ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲು ಅವಕಾಶ ನೀಡಲಾಗಿದೆ. ಪಕ್ಕದ ರಾಜ್ಯಗಳ 1,889 ವಿದ್ಯಾರ್ಥಿಗಳಿಗೆ ಗಡಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ಹೆಚ್ಚುವರಿ ಪರೀಕ್ಷಾ ಕೊಠಡಿ ಪ್ರವೇಶ ಪತ್ರವನ್ನು ಇಲಾಖೆಯ ವೆಬ್ ಸೈಟ್ www.puc.kar.nic.in ನಿಂದ ಪಡೆದುಕೊಂಡು ಅದನ್ನು ಪರೀಕ್ಷೆ ಬರೆಯುವ ದಿನ ನೀಡಬಹುದು.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸಹಾಯವಾಣಿಯನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳು 08182-276904/ 9449363892/ 9035034671ಗೆ ಕರೆಮಾಡಬಹುದು.

SCROLL FOR NEXT