ಸಂಗ್ರಹ ಚಿತ್ರ 
ರಾಜ್ಯ

ವಿಕಾಸಸೌಧಕ್ಕೂ ಕಾಲಿಟ್ಟ ಕೊರೋನಾ; ಮಹಿಳಾ ಸಿಬ್ಬಂದಿಗೆ ಸೋಂಕು, ಕಚೇರಿಗಳು ಸೀಲ್‌ಡೌನ್

ವಿಕಾಸಸೌಧದ ಆಹಾರ ಇಲಾಖೆಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರು: ವಿಕಾಸಸೌಧದ ಆಹಾರ ಇಲಾಖೆಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಶಕ್ತಿಸೌಧಕ್ಕೂ ಕೊರೋನಾ ಕಾಲಿಟ್ಟ ಕಾರಣ ಇದೀಗ ಸಚಿವಾಲಯದ ನೌಕರರಲ್ಲಿ ಆತಂಕ ಮೂಡಿದೆ. ವಿಕಾಸಸೌಧದ ಆಹಾರ ಇಲಾಖೆಯ ಮಹಿಳಾ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ವಿಕಾಸಸೌಧದ ನೆಲಮಹಡಿಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ವೈರಾರಣು ಕಂಡು ಬಂದಿದೆ. 

ಮಹಿಳೆ ಆಹಾರ ಇಲಾಖೆಯಲ್ಲಿ ಸ್ಟೆನೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದ ವೇಳೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಸೋಂಕಿತ ಮಹಿಳೆಯನ್ನು ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಇಂದು ಮಹಿಳೆ ಕರ್ತವ್ಯಕ್ಕೆ ಹಾಜರಾಗಿದ್ದರು. ಹೀಗಾಗಿ ಅಧಿಕಾರಿಗಳು ವಿಕಾಸಸೌಧದ ಆಹಾರ ಇಲಾಖೆಯ ಕೊಠಡಿಯ ಅಕ್ಕಪಕ್ಕದ ಎರಡು ಕೊಠಡಿಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಈ ಬೆಳವಣಿಗೆ ನಂತರ ವಿಕಾಸಸೌಧ ಹಾಗೂ ವಿಧಾನಸೌಧದ ನೌಕರರು ಆತಂಕಕ್ಕೆ ಒಳಗಾಗಿದ್ದಾರೆ. ಸಚಿವಾಲಯ ನೌಕರರ ಸಂಘದ ನಿಯೋಗ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಭೇಟಿಯಾಗಿ ಆಹಾರ ಇಲಾಖೆಯ ಎಲ್ಲ ಸಿಬ್ಬಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು. ಭೇಟಿ ಬಳಿಕ ಮಾತನಾಡಿದ ಸಂಘದ ಅಧ್ಯಕ್ಷ ಗುರುಸ್ವಾಮಿ, ಸಚಿವಾಲಯ ಆಡಳಿತದ ಕೇಂದ್ರ ಬಿಂದುವಾಗಿದೆ. ಇಲ್ಲಿ ಯಾರಿಗಾದರು ಕೊರೋನಾ ಬಂದರೆ ಇಡೀ ಆಡಳಿತ ಯಂತ್ರದ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಚಿವಾಲಯದ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಟನೆಲ್ ಅಳವಡಿಸಬೇಕು. ಕೇವಲ ಥರ್ಮಲ್ ಸ್ಕ್ರೀನಿಂಗ್ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಸಚಿವಾಲಯದಲ್ಲಿ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT