ಚಿರಂಜೀವಿ ಸರ್ಜಾ ಪಾರ್ಥಿವ ಶರೀರ 
ರಾಜ್ಯ

ಚಿರು ಅಂತ್ಯಕ್ರಿಯೆ ವೇಳೆ ನಿಯಮ ಉಲ್ಲಂಘನೆ: 59 ದೂರು ದಾಖಲು

ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ನಿಯಮ ಪಾಲಿಸದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರೇ ಸ್ವಯಂಪ್ರೇರಿತವಾಗಿ ಸಿಲಿಕಾನ್ ಸಿಟಿಯ ಜಯನಗರ, ತಲಘಟ್ಟಪುರ, ಜಯನಗರ, ಬನಶಂಕರಿ, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ರೋಗದ ಹಾವಳಿ ಹೆಚ್ಚಿದ್ದಾಗಲೇ ತೀವ್ರ ಹೃದಯಾಘಾತದಿಂದ ನಟ ಚಿರಂಜೀವಿ ಸರ್ಜಾ ಅವರು ಜೂ.7 ರಂದು ಕೊನೆಯುಸಿರೆಳಿದಿದ್ದರು.
ಏಕಾಏಕಿ ನಟನ ಸಾವು ಸ್ಯಾಂಡಲ್‌ವುಡ್ ಸೇರಿ ಕರುನಾಡಿಗೆ ಬರ ಸಿಡಿಲು ಬಡಿದಂತಾಗಿತ್ತು. ಅವರ ಪಾರ್ಥಿವ ಶರೀರವನ್ನು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರಿಸಲಾಗಿತ್ತು. 

ಕೇವಲ 39 ವರ್ಷದಲ್ಲಿ ಚಿರಂಜೀವಿ ತಮ್ಮ ಜೀವನಕ್ಕೆ ವಿದಾಯ ಹೇಳಿದ್ದರಿಂದ ಆಘಾತಕೊಳ್ಳಗಾದ ಅಭಿಮಾನಿ ದಂಡು ಸೇರಿ ಸ್ಯಾಂಡಲ್ ವುಡ್ ಕಲಾವಿದರು, ರಾಜಕೀಯ ದುರೀಣರು ಅವರಿಗೆ ಅಂತಿಮ ನಮನ ಸಲ್ಲಿಸಿದರು. 

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಸಂಖ್ಯಾತ ಜನರು ಪಾರ್ಥಿವ ಶರೀರ ವೀಕ್ಷಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಸೂಚಿಸಿದ್ದ ಕೊರೊನಾ ರೋಗ ನಿಯಂತ್ರಣದ ನಿಯಮ‌ ಉಲ್ಲಂಘಿಸಿದ ಆರೋಪದಡಿ ವಿವಿಧ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ‌.

ಜೂ.8 ರಂದು ದಕ್ಷಿಣ ತಾಲೂಕು ನೆಲಗುಳಿ ಗ್ರಾಮದಲ್ಲಿರುವ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರು ಅಂತ್ಯ ಸಂಸ್ಕಾರ ಕಾರ್ಯ ನೆರವೇರಿತ್ತು. ಕೊರೋನಾ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT