ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಇಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಪರೀಕ್ಷೆ ಬರೆಯುತ್ತಿರುವ 5.9 ಲಕ್ಷ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಲಾಕ್'ಡೌನ್ ನಿಂದ ಮುಂದುಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆ ಗುರುವಾರ ರಾಜ್ಯದಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಸಂಗ್ರಹ ಚಿತ್ರ
Manjula VN
Updated On : 18 Jun 2020, 8:26 am

ಬೆಂಗಳೂರು: ಲಾಕ್'ಡೌನ್ ನಿಂದ ಮುಂದುಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆ ಗುರುವಾರ ರಾಜ್ಯದಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಉತ್ತಮ ರೀತಿ ಪರೀಕ್ಷೆ ಬರೆವ ಜೊತೆಗೆ ಆರೋಗ್ಯ ದೃಷ್ಟಿಯಿಂದ ಕೊರೋನಾ ನಿಯಂತ್ರಣ ಕ್ರಮ ತಪ್ಪದೆ ಪಾಲಿಸಿ. 

ಆಂಗ್ಲಭಾಷಾ ಪರೀಕ್ಷೆಗೆ ಒಚ್ಚು 95,997 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಉಚಿತ ಸಾರಿಗೆ ವ್ಯವಸ್ಥೆ ಮಾಡಿದೆ. ನಿಗದಿತ ಅವಧಿಗೂ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರಬೇಕು. 

Advertisement

Advertisement

ಬರುವಾಗ ಹಾಲ್ ಟಿಕೆಟ್, ತಮ್ಮ ಗುರುತಿನ ಚೀಟಿ ಜೊತೆಗೆ ಮಾಸ್ಕ್, ಪ್ರತ್ಯೇಕ ವಾಟಲ್ ಬಾಟಲ್, ಅನಾರೋಗ್ಯವಿದ್ದವರು ಅಗತ್ಯ ಔಷಧಿಗಳನ್ನು ಮರೆಯದೆ ತರಬೇಕು. ಮೊಬೈಲ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣ ತರುವುದನ್ನು ನಿಷೇಧಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments