ಸಂಗ್ರಹ ಚಿತ್ರ 
ರಾಜ್ಯ

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

ಬಾಗಲಕೋಟೆ: ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

28 ವರ್ಷದ ರೈತ ಶಂಕರಪ್ಪ ಅವರು ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ರೂ. ಹಾಗೂ ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 3 ಲಕ್ಷ ರೂ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ಅಲ್ಲದೇ, ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆದಿದ್ದ ಬೆಳೆ ಹಾನಿಗೀಡಾಗಿತ್ತು. ಹೀಗಾಗಿ ಆಗಿನಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಸಾಲ ಹೇಗೆ ಪಾವತಿಸುವುದು ಎಂದು ನೊಂದಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್