ರಾಜ್ಯ

ಮುಖ್ಯಮಂತ್ರಿ ಗೃಹ ಕಚೇರಿ ಸೀಲ್ ಡೌನ್ ತೆರವು : ಮಹಿಳಾ ಸಿಬ್ಬಂದಿ ವರದಿ ನೆಗೆಟಿವ್ ವರದಿ

Shilpa D

ಬೆಂಗಳೂರು; ಮಹಿಳಾ ಪೇದೆಗೆ ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೂಡಿದ ಆತಂಕ ದೂರವಾಗಿದ್ದು, ಎಲ್ಲ   ಚಟುವಟಿಕೆಗಳು ಮೊದಲಿನಂತೆ ಪ್ರಾರಂಭಗೊಂಡಿವೆ. ಗೃಹ ಕಚೇರಿ ಕೃಷ್ಣಾಗೆ ಮಾಡಲಾಗಿದ್ದ ಸೀಲ್‌ಡೌನ್ ಅನ್ನು ಶನಿವಾರ ತೆರವುಗೊಳಿಸಲಾಗಿದೆ.

ಕಚೇರಿ ಸಿಬ್ಬಂದಿ ನಿರಾಳವಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಡೀ ಕಚೇರಿಗೆ ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೇದೆಯ ಪತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಆಕೆಯನ್ನು ಸಹ ಕ್ವಾರಂಟೈನ್ ಮಾಡಲಾಗಿತ್ತು. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿದ್ದ ಮುಖ್ಯಮಂತ್ರಿಗಳ ಎಲ್ಲಾ ಸಭೆಗಳನ್ನು ವಿಧಾನಸೌಧದಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಗುರುವಾರವೇ ಮಹಿಳಾ ಪೇದೆ ಗಂಟಲು ದ್ರವವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇಂದು ನೆಗೆಟಿವ್ ಇರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳಾ ಪೇದೆಗೆ ಕೆಲ ದಿನಗಳ ಮಟ್ಟಿಗೆ ಕರ್ತವ್ಯಕ್ಕೆ ಹಾಜರಾಗದಂತೆ ಮೌಖಿಕ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾ ಅತ್ಯಂತ ಸೂಕ್ಷ್ಮ ಸ್ಥಳವಾಗಿದೆ. ಇಲ್ಲಿ ಪ್ರತಿದಿನ ಒಂದಲ್ಲೊಂದು ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಮುಖ್ಯಮಂತ್ರಿಗಳ ಸಿಬ್ಬಂದಿ, ಪ್ರಧಾನ ಕಾರ್ಯದರ್ಶಿಗಳು, ರಾಜಕೀಯ ಕಾರ್ಯದರ್ಶಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ,

SCROLL FOR NEXT