ಸಾಂದರ್ಭಿಕ ಚಿತ್ರ 
ರಾಜ್ಯ

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಪಲ್ಟಿ; ಒಂದೇ ಕುಟುಂಬದ ಇಬ್ಬರು ಸಾವು

ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಒಂದೇ ಕುಟುಂಬದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಬಳಿ ನಡೆದಿದೆ

ರಾಯಚೂರು: ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಒಂದೇ ಕುಟುಂಬದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಬಳಿ ನಡೆದಿದೆ.ಶಿರಸಿ ಮೂಲದ ಮೆಹನಾಜ್ (28) ಮತ್ತು ಇಸ್ಮಾಯಿಲ್ ಸಾಬ್ (70) ಮೃತ ದುರ್ದೈವಿಗಳಾಗಿದ್ದಾರೆ. 

ಅಂತ್ಯಸಂಸ್ಕಾರವೊಂದರಲ್ಲಿ ಪಾಲ್ಗೊಳ್ಳಲು ಶಿರಸಿಯಿಂದ ರಾಯಚೂರಿಗೆ ತೆರಳುತ್ತಿದ್ದಾಗ ಮಣ್ಣಿಕೇರಿ ಬಳಿ ರಸ್ತೆಯಲ್ಲಿ ಅಡ್ಡ ಬಂದ ನಾಯಿಗೆ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ‌ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದು, ಅಪಘಾತದಲ್ಲಿ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ‌ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?