ಬಿಎಸ್ ಯಡಿಯೂರಪ್ಪ 
ರಾಜ್ಯ

ಮುಂದಿನ 15 ದಿನ ತೀವ್ರ ಮುನ್ನೆಚ್ಚರಿಕೆ ಕೈಗೊಂಡರೆ ಕೊರೊನಾ ನಿಯಂತ್ರಣ ಸಾಧ್ಯ: ಬಿಎಸ್ ಯಡಿಯೂರಪ್ಪ

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿ ಯಡಿಯೂರಪ್ಪ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು.

ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ. ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!