ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಸಾಂದರ್ಭಿಕ ಚಿತ್ರ 
ರಾಜ್ಯ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ: ಹೊಸ ನಿಯಮಾವಳಿಗಳೊಂದಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ.

ಅಧ್ಯಕ್ಷರು ಹಾಗೂ ಕಾರ್ಯಕಾರಿ ಸದಸ್ಯರ ನೇಮಕಕ್ಕೆ ಮುಖ್ಯಮಂತ್ರಿ ನೇತೃತ್ವದ ತ್ರಿಸದಸ್ಯ ಸಮಿತಿ‌ ರಚನೆ ಮಾಡಲಾಗಿದ್ದು, ಈ ಮೂಲಕ ಹಾಲಿ ನಿಯಮಾವಳಿಗಳಿಗೆ ತಿಲಾಂಜಲಿ ನೀಡಿ ಹೊಸ ನಿಯಮಾವಳಿಯನ್ನು ಸರ್ಕಾರ ರೂಪಿಸಿದೆ.

ಪರಿಸರ ವಿಜ್ಞಾನ, ಪರಿಸರ ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಅಥವಾ ಅನ್ವಯಿಕ ವಿಜ್ಞಾನ ಸೇರಿದಂತೆ ತತ್ಸಮಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ, ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಅಥವಾ ಆಡಳಿತದಲ್ಲಿ ವಿಭಾಗದಲ್ಲಿ ಕೆಲಸ ನಿರ್ವಹಣೆ ಮಾಡಿರುವವರನ್ನು ಕೂಡ ಹುದ್ದೆಗೆ ಆಯ್ಕೆ ಮಾಡುವ ಅವಕಾಶ ಕಲ್ಪಿಸಿ ಸರ್ಕಾರ ನಿಯಮ ರೂಪಿಸಿದೆ.

ಅಧ್ಯಕ್ಷರಾಗುವವರು 56 ವರ್ಷ ವಯೋಮಾನದವರಾಗಿರಬೇಕು. ಅಧ್ಯಕ್ಷರ ಆಯ್ಕೆಗಾಗಿ ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಯು ಸಾರ್ವಜನಿಕವಾಗಿ ಅರ್ಜಿ ಆಹ್ವಾನಿಸಬೇಕು. ರಾಜ್ಯ ಮತ್ತು ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಅರ್ಜಿ ಆಹ್ವಾನಿಸಿರುವುದನ್ನು ಪ್ರಕಟಿಸಬೇಕು. ಆಯ್ಕೆ ಕಮಿಟಿ ಅರ್ಜಿಗಳನ್ನು ಹಾಗೂ ಅರ್ಹತೆಗಳ‌ನ್ನು‌ ಪರಿಶೀಲಿಸಿ ಅಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಬೇಕು. ಅಭ್ಯರ್ಥಿ ಆಯ್ಕೆಗೆ ಸೂಕ್ತ ಕಾರಣಗಳ‌ನ್ನು ನೀಡಿ ಆಯ್ಕೆಯ ಮಾಹಿತಿಯನ್ನು ದಾಖಲಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.

ಸರ್ಕಾರವು ಸಂಸ್ಥೆಗೆ ಹಿರಿಯ ಐಎಎಸ್ ಸದಸ್ಯ ಕಾರ್ಯದರ್ಶಿಯನ್ನು ನೇಮಿಸಲು ಅವಕಾಶ ಕಲ್ಪಿಸಿದೆ.

ಹಿಂದಿನ ಸರ್ಕಾರಗಳು ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಜಕೀಯವಾಗಿ ಅಧ್ಯಕ್ಷರನ್ನು ನೇಮಕಗೊಳಿಸಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳಿಂದ ಮುಖಭಂಗಕ್ಕೀಡಾಗಿತ್ತು. ಇದನ್ನು ತಪ್ಪಿಸಲು ಮಾರ್ಗಸೂಚಿಗಳನ್ನು ಪ್ರಕಟಿಸುವ ಮೂಲಕ ಕಾನೂನಿಗೆ ಅಡ್ಡಿ ಆತಂಕಗಳನ್ನು ನಿವಾರಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT