ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ ಮಹಾಮಾರಿ ವೈರಸ್'ಗೆ 5 ಮಂದಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಸೋಮವಾರ ಪತ್ತೆಯಾದ 249 ಪ್ರಕರಣಗಳ ಪೈಕಿ ಬೆಂಗಳೂರು ನಗರದಿಂದಲೇ 126 ಪ್ರಕರಣಗಳು ಬೆಳಕಿಗೆ ಬಂದಿದೆ.

ಸಂಗ್ರಹ ಚಿತ್ರ
Manjula VN
Updated On : 23 Jun 2020, 12:58 pm

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಸೋಮವಾರ ಪತ್ತೆಯಾದ 249 ಪ್ರಕರಣಗಳ ಪೈಕಿ ಬೆಂಗಳೂರು ನಗರದಿಂದಲೇ 126 ಪ್ರಕರಣಗಳು ಬೆಳಕಿಗೆ ಬಂದಿದೆ. 

ರಾಜ್ಯದಲ್ಲಿ ಈ ವರೆಗೂ 9,399 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಈ ವರೆಗೂ ಶೇ.61.39 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೆ, ಶೇ.1.49ರಷ್ಟು ಮಂದಿ ಬಲಿಯಾಗಿದ್ದಾರೆ. 

ಈ ನಡುವೆ ಸೋಂಕಿತರ ಸಂಪರ್ಕದಲ್ಲಿರುವವರನ್ನು 24 ಗಂಟೆಗಳೊಳಗೆ ಕಂಡು ಹಿಡಿಯುವ ಕಾರ್ಯಾಚರಣಗಳು ಕೂಡ ಭರದಿಂದ ಸಾಗಿದೆ. ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬರುವ ವಲಸಿಗರಿಗೆ 14 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯ ಮಾಡಲಾಗುತ್ತಿದೆ. 

Advertisement

Advertisement

ನಗರದಲ್ಲಿ ನಿನ್ನೆ ಒಂದೇ ದಿನ 5 ಮಂದಿ ಬಲಿಯಾಗಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಈ ವರೆಗೂ 142 ಮಂದಿ ಬಲಿಯಾದಂತಾಗಿದೆ. ಕಳೆದ 3-4 ದಿನದಿಂದ ಬಳ್ಳಾರಿಯಲ್ಲಿ 15 ಪ್ರಕರಣ, ಬೀದರ್ ನಲ್ಲಿ 10, ಕಲಬುರಗಿಯಲ್ಲಿ 8, ಹಾವೇರಿಯಲ್ಲಿ 6 ಸೋಂಕು ಪ್ರಕರಣಗಳಿಗೆ ಸೋಂಕಿನ ಮೂಲಗಳು ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದ್ದು, ಈ ಬೆಳವಣಿಗೆಗಳು ರಾಜ್ಯದಲ್ಲಿ ಕೊರೋನಾ ಸಮುದಾಯ ಹಂತಕ್ಕೆ ತಲುಪಿದೆಯೇ ಎಂಬ ಪ್ರಶ್ನೆಗಳು ಮೂಡತೊಡಗಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement