ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು, ಕೊಲ್ಕತ್ತಾದಲ್ಲಿ ಅತ್ತೆಯನ್ನೂ ಕೊಲೆಗೈದು ಉದ್ಯಮಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದ ಟೆಕ್ಕಿಯೊಬ್ಬ ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಮಿತ್‌ ಎಂಬಾ ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬ ಕುಟುಂಬ ಕಲಹದಿಂದ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದ ಉದ್ಯಮಿಯೊಬ್ಬ ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಕುಟುಂಬ ಕಲಹದಿಂದ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ನಂತರ ವಿಮಾನದ ಮೂಲಕ ಕೋಲ್ಕತ್ತಾಗೆ ತೆರಳಿ ಅಲ್ಲಿ ಅತ್ತೆಯನ್ನು ಗುಂಡಿಕ್ಕಿ ಕೊಂದು ನಂತರ ತಾನೂ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿರುವ ಭಯಾನಕ ಸರಣಿ ಕೊಲೆ ಘಟನೆ ವರದಿಯಾಗಿದೆ.

42 ವರ್ಷದ ಅಮಿತ್ ಅಗರ್ವಾಲ್ ತನ್ನ ಪತ್ನಿ ಶಿಲ್ಪಿ ಧಂಧಾನಿಯಾ ಅವರನ್ನು ಬೆಂಗಳೂರಿನ ಮಹದೇವಪುರ ನಿವಾಸದಲ್ಲಿ ಕೊಲೆ ಮಾಡಿದ್ದಾನೆ. ನಂತರ ಕೋಲ್ಕತ್ತಾಗೆ ಹೋಗಿ ಅತ್ತೆ ಲಲಿತ ಧಂಧಾನಿಯಾ ಅವರನ್ನು ಶೂಟ್ ಮಾಡಿ ಕೊಂದಿದ್ದಾನೆ. ನಂತರ ತಾನೂ ಅದೇ ಪಿಸ್ತೂಲ್‌ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಲ್ಕೊತ್ತಾ ಪೊಲೀಸರ ಮಾಹಿತಿ ಮೇರೆಗೆ ಮಹಾದೇವಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಆತ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ, ಶಿಲ್ಪಿ ಅಗರ್ ವಾಲ್ ಮೃತದೇಹ ಅಡುಕೋಣೆಯಲ್ಲಿ ಬಿದ್ದಿರುವುದನ್ನ ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ.

ವೇಳೆ ಪೊಲೀಸರು ಮನೆ ಸುತ್ತ ಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ಅಮಿತ್‌ ಬ್ಯಾಗಿನಲ್ಲಿ ಮರಣ ಪತ್ರ ಸಿಕ್ಕಿದೆ. ಇದರಲ್ಲಿ ತನ್ನ ಪತ್ನಿಯನ್ನ ಕೊಂದಿರುವುದಾಗಿ ಅಮಿತ್‌ ತಿಳಿಸಿದ್ದ. ಸದ್ಯ ಬೆಂಗಳೂರು ಹಾಗೂ ಕೊಲ್ಕತ್ತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಾಥಮಿಕವಾಗಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ