ಎಚ್.ಸಿ ಬಾಲಕೃಷ್ಣ 
ರಾಜ್ಯ

ಮಾಗಡಿ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಪುತ್ರಿಗೆ ಕೊರೋನಾ ಸೊಂಕು 

ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ

ಬೆಂಗಳೂರು: ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಈ ಕುರಿತು ಬಾಲಕೃಷ್ಣ ಅವರೇ ಸ್ವತಃ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ‘ನನ್ನ ಪುತ್ರಿ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದಾಗ ವರದಿಯು ಪಾಸಿಟಿವ್‌ ಬಂದಿದೆ. ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಷಯವನ್ನು ಎಲ್ಲರ ಗಮನಕ್ಕೆ ತಿಳಿಸಲು ಇಚ್ಛಿಸುತ್ತೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಎಲ್ಲಾ ನನ್ನ ಆತ್ಮೀಯರಲ್ಲಿ ನನ್ನ ಮನವಿ, ಯಾವುದೇ ಆತಂಕ ಬೇಡ, ದಯವಿಟ್ಟು ಯಾರೂ ಕರೆ ಮಾಡಬೇಡಿ, ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ವಿನಂತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಸಿ.ಬಾಲಕೃಷ್ಣ ಬರೆದುಕೊಂಡಿದ್ದಾರೆ.

ಎಲ್ಲರಿಗೂ ನನ್ನ ನಮಸ್ಕಾರ,
ಮಾಗಡಿ ಬಾಲಕೃಷ್ಣ ಆದ ನಾನು ನನ್ನ ಮಗಳಾದ ಡಾಕ್ಟರ್ ರಚನ ,ಅವಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ, ಕೋರೋನಾ (Covid-19) ಪರೀಕ್ಷೆ ಮಾಡಿಸಿದಾಗ, ಪರೀಕ್ಷಾ ವರದಿಯಲ್ಲಿ ಕರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!