ಬೈರತಿ ಬಸವರಾಜ್ 
ರಾಜ್ಯ

ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಇಲ್ಲ: ಸಚಿವ ಬೈರತಿ‌ ಬಸವರಾಜ್

ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು‌. 

ಕಲಬುರಗಿ: ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು‌. 

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ಕಟ್ಟಲು ಜನರಿಗೆ ತೊಂದರೆಯಾದರೆ, ತೆರಿಗೆ ಪಾವತಿ ಮಾಡುವ ಅವಧಿ ವಿಸ್ತರಿಸಲಾಗುವುದು. ಆದರೆ, ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡುವುದಿಲ್ಲ. ಜನರ ತೆರಿಗೆಯ ಹಣವನ್ನು ಸರ್ಕಾರ  ಸ್ವಂತಕ್ಕೆ ಬಳಸಿಕೊಳ್ಳುವುದಿಲ್ಲ. ಆಯಾ ಜಿಲ್ಲೆಗಳ ಅಭಿವೃದ್ಧಿಗೆ ಉಪಯೋಗಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿ ವಿಚಾರದ ಬಗ್ಗೆ ಮಾತನಾಡಿ, ಲಾಕ್‍ಡೌನ್ ಜಾರಿ ಮಾಡೋದು ಸಿಎಂಗೆ ಬಿಟ್ಟ ವಿಚಾರ. ಕೇಂದ್ರದ ಜೊತೆ ಚರ್ಚಿಸಿ ಸಿಎಂ ಅವರೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಮಹಾನಗರ ಪಾಲಿಕೆ ಆಯುಕ್ತರು ಸಹ ಅತ್ಯಂತ ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ ಅಪ್ಪಾ ಕೆರೆ ಅಭಿವೃದ್ಧಿಪಡಿಸಲು ನಿರ್ಧಾರ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳನ್ನ ‘ಕೂಡಾ’ (KUDA) ಸಹಯೋಗದೊಂದಿಗೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!