ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಬೆಡ್ ಸಿಗದೆ ಕೊರೋನಾ ಸೋಂಕಿತರ ಪರದಾಟ, 20 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಡ್ ಗಳು ಖಾಲಿ ಇಲ್ಲ ಎಂಬ ಕಾರಣಕ್ಕೇ ಕೊರೋನಾ ಸೋಂಕಿತರು ಚಿಕಿತ್ಸೆ ಇಲ್ಲದೆ ಪರದಾಡಿದ ಪ್ರಕರಣಗಳು ವರದಿಯಾಗುತ್ತಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ನಗರದಲ್ಲಿರುವ 20 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 25 Jun 2020, 1:34 pm

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಡ್ ಗಳು ಖಾಲಿ ಇಲ್ಲ ಎಂಬ ಕಾರಣಕ್ಕೇ ಕೊರೋನಾ ಸೋಂಕಿತರು ಚಿಕಿತ್ಸೆ ಇಲ್ಲದೆ ಪರದಾಡಿದ ಪ್ರಕರಣಗಳು ವರದಿಯಾಗುತ್ತಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ನಗರದಲ್ಲಿರುವ 20 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಿದೆ.

ನಗರದಲ್ಲಿರುವ ಪ್ರತೀಯೊಂದು ಪ್ರಮುಖ ಖಾಸಗಿ ಆಸ್ಪತ್ರೆಗಳ ಒಂದು ಬ್ರಾಂಚ್ ಆಸ್ಪತ್ರೆ (ಪ್ರಾಂತೀಯ ಆಸ್ಪತ್ರೆ)ಯನ್ನು ಕೊರೋನಾ ಚಿಕಿತ್ಸೆಗೆ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದಲ್ಲಿರುವ 20 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಇಲ್ಲಿ ಕೊರೋನಾ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡುವ ಕುರಿತು ಸೂಚನೆ ನೀಡಲಾಗಿದೆ. 

ಅಂತೆಯೇ ಆಸ್ಪತ್ರೆಗಳಲ್ಲಿರುವ ಬೆಡ್​ಗಳು, ಆಕ್ಸಿಜನ್ ಸಾಮರ್ಥ್ಯ, ICU ಬೆಡ್​ಗಳು, ವೆಂಟಿಲೇಟರ್ ಗಳ ಕುರಿತು ಸಂಪೂರ್ಣ ಮಾಹಿತಿಯನ್ನು 48 ಗಂಟೆಯೊಳಗೆ ನೀಡುವಂತೆ ಇಲಾಖೆ ಕೇಳಿದೆ. ಅಲ್ಲದೆ ಎಷ್ಟು ಬೇಗ ಸಾಧ್ಯವಾಗುತ್ತದೆಯೋ ಅಷ್ಟು ಬೇಗ ಈ ಆಸ್ಪತ್ರೆಗಳಲ್ಲಿರುವ ಕೊರೋನಾರಹಿತ ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ರವಾನೆ ಮಾಡುವಂತೆಯೂ ಸೂಚನೆ ನೀಡಲಾಗಿದೆ. 

Advertisement

Advertisement

ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಲೇ ಇದೆ. ಕಳೆದ ನಾಲ್ಕೈದು ದಿನಗಳಿಂದ ನಿತ್ಯ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಇದರ ಪರಿಣಾಮ ವಿಕ್ಟೋರಿಯಾ, ‌ಬೌರಿಂಗ್, ರಾಜೀವ್ ಗಾಂಧಿ ಆಸ್ಪತ್ರೆಗಳ ಬೆಡ್​ ಫುಲ್ ಆಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ‌ ಮತ್ತು ಬಿಬಿಎಂಪಿ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ ನಡೆಸಿದೆ. ಅದರಂತೆ ಇದೀಗ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments