ರಾಜ್ಯ

ಮಂಗಳೂರು: ಕರ್ತವ್ಯನಿರತ ಐವರು ಪಿಜಿ ವೈದ್ಯರಿಗೆ ಕೊರೋನಾ ಪಾಸಿಟಿವ್

Lingaraj Badiger

ಮಂಗಳೂರು: ಮಹಾಮಾರಿ ಕೊರೋನಾ ವೈರಸ್ ವೈದ್ಯರಿಗೂ ಕಂಟಕವಾಗಿ ಕಾಡುತ್ತಿದ್ದು, ಮಂಗಳೂರಿನಲ್ಲಿ ಕೊವಿಡ್-19 ಕರ್ತವ್ಯನಿರತ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ತಗಲಿದೆ.

ನಗರದ ವೆನ್ಲಾಕ್ ಕೊವಿಡ್ ಆಸ್ಪತ್ರೆ ಮತ್ತು ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐವರು ವೈದ್ಯರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಯಾರಿ ಅವರು ತಿಳಿಸಿದ್ದಾರೆ.

ಆ ಐವರು ಕಸ್ತೂರಿಬಾ ವೈದ್ಯಕೀಯ ಕಾಲೇಜ್ ನ ಪಿಜಿ ವಿದ್ಯಾರ್ಥಿಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಹೇಳಿದ್ದಾರೆ.

ಈ ವೈದ್ಯರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆಹಚ್ಚುತ್ತಿದ್ದೇವೆ. ಅವರು ಪ್ರತಿದಿನವೂ ಅನೇಕ ರೋಗಿಗಳಿಗೆ ಚಿಕಿತ್ಸೆ ನೀಡಿರುವುದರಿಂದ ರೋಗಿಗಳನ್ನು ಪತ್ತೆಹಚ್ಚುವುದು ಕಷ್ಟಕರ ಪ್ರಕ್ರಿಯೆ. ನಾವು ಈಗಾಗಲೇ 30 ಕ್ಕೂ ಹೆಚ್ಚು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT