ರಾಜ್ಯ

8 ಮಂದಿಯಲ್ಲಿ ವೈರಸ್ ಪತ್ತೆ: ಆತಂಕದಲ್ಲಿ ಬಾಷ್ ಕಂಪನಿಯ ನೌಕರರು

Manjula VN

ಬೆಂಗಳೂರು: ತಮ್ಮೊಂದಿಗೆ ಕಾರ್ಯನಿರ್ವಹಿಸುತ್ತಿದ್ದ 8 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬಿಡದಿಯಲ್ಲಿರುವ ಬಾಷ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಳಿದ ನೌಕರರು ಆತಂಕಕ್ಕೊಳಗಾಗಿದ್ದಾರೆ. 

ನೌಕರರಲ್ಲಿ ವೈರಸ್ ಪತ್ತೆಯಾಗಿರುವ ಕುರಿತು ಸಂಸ್ಥೆ ನಮಗೆ ಯಾವುದೇ ರೀತಿಯ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಆದರೆ, ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ವೈರಸ್ ಪತ್ತೆಯಾಗುತ್ತಿದ್ದಂತೆಯೇ ಸಾಮಾನ್ಯವಾಗಿ ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗುತ್ತದೆ. ಆದರೆ, ನಾವು ಅಂತಹ ಯಾವುದೇ ಬೆಳವಣಿಗೆಯನ್ನು ನೋಡಲಿಲ್ಲ. ನಾವಿಲ್ಲಿ ಸಂಕಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ನೌಕರರೊಬ್ಬರು ಹೇಳಿದ್ದಾರೆ. 

ಕಾರ್ಮಿಕರ ಸಂಘ ರಜೆ ನೀಡುವಂತೆ ಆಗ್ರಹಿಸುತ್ತಿದೆ. ಆದರೆ, ಆಡಳಿತ ಮಂಡಳಿ ಇದಕ್ಕೆ ಒಪ್ಪಿಕೊಳ್ಳುತ್ತಿಲ್ಲ. ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯ ಹೆಚ್ಚಾಗುತ್ತಿದೆ. ಇಲ್ಲಿ ಪಾರದರ್ಶಕತೆಯಿಲ್ಲ. ಐವರು ನೌಕರರಿಗೆ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಕಾರ್ಖಾನೆಯನ್ನು ಸೀಲ್ಡೌನ್ ಮಾಡಿದರೆ, ಮತ್ತೆ ಕಾರ್ಖಾನೆ ಆರಂಭಿಸಿದಾಗ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಆಗಾಗ ಕಾರ್ಖಾನೆಯನ್ನು ಬಂದ್ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆಂದು ತಿಳಿಸಿದ್ದಾರೆ. 

ಮೂಲಗಳ ಪ್ರಕಾರ ಸಂಸ್ಥೆಯ ಆಡಳಿತ ಮಂಡಳಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನೌಕರರಿಗೆ ರಜೆ ನೀಡಿದ್ದು, ಎಲ್ಲರೂ ಕ್ವಾರಂಟೈನ್ ನಲ್ಲಿದ್ದಾರೆ. ಪ್ರಸ್ತುತ ಕಾರ್ಖಾನೆಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 

SCROLL FOR NEXT