ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾಲಿನಲ್ಲಿ ನಿಂತಿರುವ ವಿದ್ಯಾರ್ಥಿಗಳು 
ರಾಜ್ಯ

ಎಸ್ಎಸ್ಎಲ್'ಸಿ: ಕೊರೋನಾ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊರೋನಾ ಸೋಂಕು ಹರಡುವ ಆತಂಕ ಭೀತಿಯ ನಡುವೆ ಗುರುವಾರದಿಂದ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭವಾಗಿದ್ದು, ಮಹಾಮಾರಿ ವೈರಸ್ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕು ಹರಡುವ ಆತಂಕ ಭೀತಿಯ ನಡುವೆ ಗುರುವಾರದಿಂದ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭವಾಗಿದ್ದು, ಮಹಾಮಾರಿ ವೈರಸ್ ಕರಿನೆರಳ ನಡುವೆಯೇ ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 

ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು ಹೀಗೆ ಸಣ್ಣ ಕಿರಿಕಿರಿಯ ನಡುವೆಯು ವಿದ್ಯಾರ್ಥಿಗಳು ನಿನ್ನೆ ರಾಜ್ಯದಾದ್ಯಂತ ಸುಸೂತ್ರವಾಗಿ ಪರೀಕ್ಷೆ ಬರೆದಿದ್ದಾರೆ. 

ರಾಜ್ಯಾದ್ಯಂತ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ಕೊಠಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಮಾಸ್ಕ್ ಧರಿಸಿದ್ದಾರೆಂಯೇ ಎಂಬುದನ್ನು ಖಚಿತಪಡಿಸಿಕೊಂಡು ಪರೀಕ್ಷಾ ಕೊಠಡಿಗೆ ಪ್ರವೇಶ ಕಲ್ಪಿಸಲಾಗಿದೆ.

ಒಟ್ಟು 7,85,140 ನೋಂದಾಯಿತ ವಿದ್ಯಾರ್ಥಿಗಳಲ್ಲಿ ಒಟ್ಟು 7,71,878 ಮಂದಿ ವಿದ್ಯಾರ್ಥಿಗಳು ರಾಜ್ಯದ 2,879 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದು, 13,212 ವಿದ್ಯಾರ್ಥಿಗಳು ವಿವಿಧ ಕಾರಣಗಳಿಂದ ಗೈರು ಹಾಜರಾಗಿದ್ದಾರೆ. 

ಈ ನಡುವೆ ಹೇಳಿಕೆ ನೀಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯು ಪರೀಕ್ಷಾ ಕೇಂದ್ರದ ಬಳಿ ಬರುವ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿಕೊಂಡರು. 

ಪರೀಕ್ಷಾ ಕೇಂದ್ರದ ಬಳಿ ಅಧಿಕಾರಿಗಳು ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳನ್ನು ಕಂಡು ಸಂತೋಷವಾಯಿತು ಎಂದು ಕೆಲ ಪೋಷಕರು ಹೇಳಿದರೆ, ಇನ್ನು ಕೆಲವರು ಪರೀಕ್ಷೆಯನ್ನು ಮುಂದೂಡಬಹುದಿತ್ತು. ವಿದ್ಯಾರ್ಥಿಗಳು ಒತ್ತಡದಲ್ಲಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆಯನ್ನು ಮುಂದೂಡುವಂತೆ ಸಚಿವರಿಗೆ ಮನವಿ ಮಾಡಿಕೊಳ್ಳುತ್ತೇನೆಂದು ಪೋಷಕರೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ