ರಾಜ್ಯ

ಚಾಮರಾಜನಗರ: 23 ಸಾವಿರ ಮಂದಿಗೆ ಕೊರೋನಾ ಪರೀಕ್ಷೆ!

Shilpa D

ಮೈಸೂರು: 70 ದಿನಗಳ ಗ್ರೀನ್ ಜೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಹೀಗಾಗಿ ಜಿಲ್ಲಾಡಳಿತ ಸೋಂಕು ಹರಡುವುದನ್ನು ತಪ್ಪಿಸಲು ಅಗತ್ಯಕ್ರಮ ಕೈಗೊಳ್ಳುತ್ತಿದೆ.

ದುರ್ಬಲವಾಗಿರುವ 23 ಸಾವಿರ ಮಂದಿಗೆ ಕೊರೋನಾ ಪರೀಕ್ಷೆ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಕ್ಷಯ ರೋಗಿಗಳು, ಗರ್ಭಿಣಿಯರು ಸೇರಿದಂತೆ ಮತ್ತಿತರರನ್ನು ಪರೀಕ್ಷೆಗೊಳಪಡಿಸಲಿದ್ದಾರೆ.

ಇವರನ್ನೆಲ್ಲಾ  ತಾಲುಕು ಕೇಂದ್ರಗಳಿಗೆ ಕರೆತಂದು ಅವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಲಾಗುವುದು, ಪರೀಕ್ಷಾ ವರದಿ ಬರುವವರೆಗೂ ಅವರನ್ನು ಪ್ರತ್ಯೇಕವಾಗಿರಿಸಲು ತಾತ್ಕಾಲಿಕ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.

ವರದಿ ನೆಗೆಟಿವ್ ಬಂದವರನ್ನು ವಾಪಸ್ ಕಳುಹಿಸಿ, ಪಾಸಿಟಿವ್ ಬಂದ ರೋಗಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ರವಿ ತಿಳಿಸಿದ್ದಾರೆ.

ಪುರಸಭೆ ಮತ್ತು ನಗರ ಸಭೆಗಳಲ್ಲಿ ಜಿಲ್ಲಾಧಿಕಾರಿ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಎಲ್ಲಾ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಲು ನಿರ್ದೇಶಿಸಲಾಗಿದೆ. ಔಷಧಿ ಸೇರಿದಂತೆ ಅಗತ್ಯ ಮೂಲಭೂತ ಸೇವೆಗಳು ಅಭಾದಿತ, ಇನ್ನೂ ಅಂತರರಾಜ್ಯ ವಾಹನಗಳನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗುವುದು. 

SCROLL FOR NEXT