ರಾಜ್ಯ

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಖಾತರಿಗೆ ದಿಢೀರ್ ಪೊಲೀಸ್ ದಾಳಿ: ಭಾಸ್ಕರ್ ರಾವ್

Shilpa D

ಬೆಂಗಳೂರು: ನಗರದಲ್ಲಿ‌‌ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಸಿಲಿಕಾನ್ ಸಿಟಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. 

ಹೀಗಾಗಿ ಸಾಮಾಜಿಕ ಅಂತರ ಖಾತರಿ ಮತ್ತು ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇದರ ಭಾಗವಾಗಿ ಮಾಲ್ ಗಳು, ಅಂಗಡಿಗಳು, ಕಚೇರಿ ಮತ್ತು ಹೋಟೆಲ್ ಗಳಲ್ಲಿ ಮಿಂಚಿನ ಪರಿಶೀಲನೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.

ಸಾರ್ವಜನಿಕರು ಹೆಚ್ಚಾಗಿ ಓಡಾಡುವ ಕಚೇರಿಗಳ ಮೇಲೆ ಪೊಲೀಸರು ಏಕಾಏಕೀ ದಿಢೀರ್ ದಾಳಿ ನಡೆಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲನೆ ನಡೆಸಲಿದ್ದಾರೆ. 

ಅಲ್ಲದೇ, ಕೊರೊನಾ ಸೋಂಕು ತಡೆಗಟ್ಟಲು ಮಾಸ್ಕ್ ಕಡ್ಡಾಯವಾಗಿ ಧರಿಸಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡುವ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆಗಾಗಿ ಈ ಕ್ರಮ ಕೈಗೊಂಡಿರುವುದಾಗಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

SCROLL FOR NEXT