ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಹೊನಬಟ್ಟಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಲಬುರಗಿ: ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಹೊನಬಟ್ಟಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೂ. 24 ರ ರಾತ್ರಿ ಪರೀಕ್ಷೆಗಾಗಿ ಮನೆ ಅಂಗಳದಲ್ಲಿ ತಡ ರಾತ್ರಿವರೆಗೂ ಓದುತ್ತಿದ್ದ ವಿದ್ಯಾರ್ಥಿನಿಯ ಬಾಯಿ ಮುಚ್ಚಿ ಪಕ್ಕದ ವಿವಾಹಿತ ವ್ಯಕ್ತಿ ನಿರ್ಜನ ಸ್ಥಳಕ್ಕೆಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಗಾಬರಿಕೊಂಡ ವಿದ್ಯಾರ್ಥಿನಿ ತಕ್ಷಣವೇ ಕಿರುಚಾಡಿದ್ದಾಳೆ.

ಬಾಲಕಿಯ ಧ್ವನಿ ಕೇಳುತ್ತಿದ್ದಂತೆ ನೆರೆಹೊರೆಯವರು ಬಂದು ರಕ್ಷಣೆ ಮಾಡಿದ್ದಾರೆ. ಲಾಕ್ ಡೌನ್ ನಿಂದಾಗಿ ಮುಂಬೈನಿಂದ ಗ್ರಾಮಕ್ಕೆ ವಾಪಸ್ಸಾಗಿದ್ದ ರಾಮ್ ಚವ್ಹಾಣ ಎಂಬ ವಿವಾಹಿತನಿಂದ ಈ ಹೀನ ಕೃತ್ಯ ನಡೆದಿದೆ ಎಂದು ಆರೋಪಿಸಿ ಜೂ. 24 ರ ರಾತ್ರಿಯೇ  ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿ ರಾಮ್ ಚವ್ಹಾಣ್ ನನ್ನು ಬಂಧಿಸಿದ್ದಾರೆ.

ಜೂ. 25 ರಂದು ಎಸ್​ಎಸ್​ಎಲ್​ಸಿ ಮೊದಲ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾಗಿದ್ದು, ಇಂದು ಕೂಡ ಗಣಿತ ಪರೀಕ್ಷೆಗೆ ಹಾಜರಾಗಿದ್ದಾಳೆ. ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!