ರಾಜ್ಯ

ಪಕ್ಕದ ಮನೆಯವರಿಗೆ ಕೊರೋನಾ; ಸ್ವಯಂ ನಿರ್ಬಂಧ ಹೇರಿಕೊಂಡ ಪ್ರಿಯಾಂಕ್ ಖರ್ಗೆ

Srinivasamurthy VN

ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ.

ಈ ಬಗ್ಗೆ ಸ್ವತಃ ಪ್ರಿಯಾಂಕ್ ಖರ್ಗೆ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದು, 'ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ 'ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ತಾವು ಮುಂದಾಗಬಾರದೆಂದು ವಿನಂತಿಸಿಕೊಳ್ಳುತ್ತೇನೆ. ಆದ್ದರಿಂದ ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ಚರ್ಚಿಸಲು ಕೋರಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

SCROLL FOR NEXT