ರಾಜ್ಯ

ಕೊರೋನಾ ತಡೆಗಾಗಿ ಕೈಗೊಂಡ ಖರ್ಚು-ವೆಚ್ಚಗಳು ಪಾರದರ್ಶಕವಾಗಿಲ್ಲ: ಶ್ವೇತಪತ್ರ ಹೊರಡಿಸಿ- ಸಿದ್ದು ಆಗ್ರಹ

Nagaraja AB

ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟಲು ರಾಜ್ಯಸರ್ಕಾರ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು -ವೆಚ್ಚಗಳು ಪಾರದರ್ಶಕವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?ಎಂದು ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಆತಂಕ ಅಸುರಕ್ಷತೆ, ಅಭದ್ರತೆಯಲ್ಲಿರುವ ಜನರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

SCROLL FOR NEXT