ಸಭೆಯ ಬಳಿಕ ಸ್ಮಾರಕ ನಿರ್ಮಾಣ ಕುರಿತು ಪತ್ರಕ್ಕೆ ಸಹಿ ಹಾಕಿದ ಸಂಸದೆ ಹಾಗೂ ಅಂಬರೀಷ್ ಪತ್ನಿ ಸುಮಲತಾ ಅಂಬರೀಷ್. ಸಿಎಂ ಯಡಿಯೂರಪ್ಪ ಹಾಗೂ ಇತರರು ಇದ್ದಾರೆ 
ರಾಜ್ಯ

ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ. ಅಂಬರೀಷ್ ಸ್ಮಾರಕ ನಿರ್ಮಾಣ 

ಹಿರಿಯ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಬೆಂಗಳೂರು: ಹಿರಿಯ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಅವರು ಇಂದು ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರವು 5 ಕೋಟಿ ರೂಪಾಯಿ ಒದಗಿಸಲಿದ್ದು ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಲ್ಲದೆ, ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎಂ. ಮಹೇಶ್ವರ ರಾವ್, ಆಯುಕ್ತ ಡಾ. ಪಿ.ಎಸ್. ಹರ್ಷ ಮತ್ತು ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ