ರಾಜ್ಯ

ಸ್ಪೀಕರ್ ತೀರ್ಪನಲ್ಲಿಯೂ 'ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟಗಾರ' ಎಂದು ಉಲ್ಲೇಖಿಸಿಲ್ಲ!

Lingaraj Badiger

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿಧಾನಸಭೆಯಲ್ಲಿ ಕಳೆದ ಎರಡು ದಿನಗಳಿಂದ ಕೋಲಾಹಲವೆ ಎದ್ದಿದೆ. 

ಯತ್ನಾಳ್ ಅವರು ಅವರು ಕ್ಷಮೇ ಕೇಳಲೇಬೇಕೆಂದು ವಿಪಕ್ಷಗಳು ಪಟ್ಟು ಹಿಡಿದು ಧರಣಿ ನಡೆಸುತ್ತಿವೆ. ಬಿಜೆಪಿಯ ಹಲವು ಸಚಿವರು, ಶಾಸಕರು ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟ ಗಾರರಲ್ಲ ಎಂಬ ಅರ್ಥ ಬರುವಂತೆ ಮಾತನಾಡಿದ್ದಾರೆ. ವಿರ್ಯಾಸವೆಂದರೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ತೀರ್ಪು ಕೊಟ್ಟಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ತೀರ್ಪಿನಲ್ಲಿ ಎಲ್ಲಿಯೂ ಕೂಡ ಎಚ್.ಎಸ್.ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಎಂದು ಉಲ್ಲೇಖಿಸಿಲ್ಲ.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇಡೀ ಬೆಳವಣಿಗೆಯ ಹಿಂದೆ ಆರ್‌ಎಸ್‌ಎಸ್ ಇದೇ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಬಸನಗೌಡ ಫಾಟೀಲ್ ಯತ್ನಾಳ್ ಹೇಳಿಕೆ, ಸ್ವಾತಂತ್ರ್ಯಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು 'ಭಾರತದ ಸ್ವಾತಂತ್ರ್ಯ ಹೋರಾಟಗಾರ' ಎಂದು ಉಲ್ಲೇಖಿಸದೆ ತೀರ್ಪು ಕೊಟ್ಟಿರುವುದನ್ನು ಸಿದ್ದರಾಮಯ್ಯ ಅವರು ಉಲ್ಲೇಖಿಸಿದ್ದಾರೆ. 

ಸಂವಿಧಾನದ ಮೇಲೆ ಬಿಜೆಪಿಯವರಿಗೆ ಗೌರವ, ನಿಷ್ಠೆಯಿಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಸಂವಿಧಾನದ ಬಗ್ಗೆ ಚರ್ಚೆ ಏಕೆ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

SCROLL FOR NEXT