ಸಂಗ್ರಹ ಚಿತ್ರ 
ರಾಜ್ಯ

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕೊಲೆ ಆರೋಪಿ ಮೇಲೆ ಡಿಜೆ ಹಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ

ಬೆಂಗಳೂರು: ಕೊಲೆ ಆರೋಪಿ ಮೇಲೆ ಡಿಜೆ ಹಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಯೂನುಸ್‌ ​ ಬಟ್ಟಿ ಎಂಬ ಕೊಲೆ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳ ಒಂದು ಗುಂಪು​ ಎರಡು ದಿನಗಳ ಹಿಂದೆ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳಿಂದ ಅಮ್ಜದ್​ ಎಂಬಾತನನ್ನು ಕೊಲೆ ಮಾಡಿತ್ತು. ಕೊಲೆ ಮಾಡಿದ್ದ ತಂಡದ ನಾಯಕ​ ಈ ಯುನುಸ್ ಎಂಬುದು ಬೆಳಕಿಗೆ ಬಂದಿತ್ತು​.

ಒಂದು ದಿನದ ಹಿಂದೆ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮಂಗಳವಾರ ಮುಂಜಾನೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ಪೊಲೀಸ್‌ ತಂಡ ಆತನೊಂದಿಗೆ ತೆರಳಿತ್ತು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಎನ್ನಲಾಗಿದೆ. ಡಿಜೆ ಹಳ್ಳಿ ಇನ್ಸ್​​​ಪೆಕ್ಟರ್ ಕೇಶವ ಮೂರ್ತಿ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದರು. 

ಆದರೂ ಆತ ಪರಾರಿಯಾಗಲು ಯತ್ನಿಸಿದ್ದ. ಆಗ ಇನ್ಸ್​​ಪೆಕ್ಟರ್​ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಎಚ್ಚರಿಕೆ ಕೊಟ್ಟಿದ್ದರಾದರೂ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮತ್ತೆ ಮುಂದಾಗಿದ್ದಾನೆ. ತಕ್ಷಣ ಪೊಲೀಸರು ಆರೋಪಿ ಯೂನುಸ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿದ ಪರಿಣಾಮ ಕುಸಿದು ಬಿದ್ದ ಆತನನ್ನು ಪೊಲೀಸರು ಸುತ್ತುವರಿದು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video