ರಾಜ್ಯ

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: 14 ಜನ‌ ಪೊಲೀಸ್ ವಶಕ್ಕೆ

Srinivasamurthy VN

ಬೆಂಗಳೂರು: ಎಸ್‌ಎಸ್‌ಎಲ್‌‌ಸಿಯ ಗಣಿತ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ 14 ಜನ ಅಪ್ರಾಪ್ತ ಬಾಲಕರನ್ನು ಉತ್ತರ ವಿಭಾಗದ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಹಲೋ ಆಪ್‌ನಲ್ಲಿ ರಾಕೇಶ್ ಅಲಿಯಾಸ್ ರಾಕೇಶ್ 8105 ಎಂಬ ಹೆಸರಿನಲ್ಲಿ ಫೆ.20ರಂದು ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪೂರ್ವ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯಾಗಿತ್ತು. ಈ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಿರ್ದೇಶಕ ಬಸವರಾಜು ಅವರು ಉತ್ತರ ವಿಭಾಗದ ಸೈಬರ್ ವಿಂಗ್ ನಲ್ಲಿ ದೂರು ದಾಖಲಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿವಿಧ 14 ಶಾಲೆ 14 ಮಂದಿ ಅಪ್ರಾಪ್ತ ಬಾಲಕರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಡಿಸಿಪಿ ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

SCROLL FOR NEXT