ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿಯಲ್ಲಿ ಕ್ರೂಸರ್ ಪಲ್ಟಿ: ಇಬ್ಬರು ಸಾವು, 10 ಮಂದಿಗೆ ಗಾಯ

ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಯಲಮಾಮಡಿ ಸಮೀಪ‌ ಸೋಮವಾರ ನಡೆದಿದೆ.

ಸಾಂದರ್ಭಿಕ ಚಿತ್ರ
Shilpa D
Updated On : 3 Mar 2020, 11:50 am

ಕಲಬುರಗಿ: ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಯಲಮಾಮಡಿ ಸಮೀಪ‌ ಸೋಮವಾರ ನಡೆದಿದೆ.

ಯಲಮಾಮಡಿ ಪುನರ್ವಸತಿ ಕೇಂದ್ರ-2ರ ನಿವಾಸಿ ಶಾಮರಾವ್​(65) ಹಾಗೂ ಯಲಮಾಮಡಿ ತಾಂಡಾನಿವಾಸಿ ಮೋತಿಬಾಯಿ(55) ಮೃತ ದುರ್ದೈವಿಗಳು.

ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಹಾಗೂ ಬೀದರ್​​ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

Advertisement

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.  ಈ ಸಂಬಂಧ ಚಿಂಚೋಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement