ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು
ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನದಿಂದ ಬಿದ್ದು 52 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ರಾಜನುಕುಂಟೆಯಲ್ಲಿ ಸೋಮವಾರ ನಡೆದಿದೆ.
ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನದಿಂದ ಬಿದ್ದು 52 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ರಾಜನುಕುಂಟೆಯಲ್ಲಿ ಸೋಮವಾರ ನಡೆದಿದೆ.
ಪಾರ್ವತಿ ಹೂಗಾರ್ (52) ಮೃತ ಮಹಿಳೆಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ಮೃತ ಪಾರ್ವತಿ ತಮ್ಮ ಪುತ್ರ ಮಂಜುನಾಥ್ (20) ಜೊತೆಗೆ ಕಾಕೋಲುವಿನಲ್ಲಿರುವ ತಮ್ಮ ಪುತ್ರಿ ಮನೆಗೆ ಭೇಟಿ ನೀಡಿ ವಿದ್ಯಾರಣ್ಯಪುರದ ಎಪಿಸಿ ಲೇಔಟ್'ನಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು.
ಈ ವೇಳೆ ವೇಗವಾಗಿ ವಾಹನ ಚಲಿಸಿದ್ದರಿಂದಾಗಿ ವಾಹನ ನಿಯಂತ್ರಣಕ್ಕೆ ಸಿಕ್ಕಿಲ್ಲ, ಈ ವೇಳೆ ಮಹಿಳೆ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಪಾರ್ವತಿಯವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪಾರ್ವತಿಯವರು ಸಾವನ್ನಪ್ಪಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದು, ಮಂಜುನಾಥ್ ನನ್ನು ವಶಕ್ಕೆ ಪಡೆದುಕೊಂಂಡಿದ್ದಾರೆ.