ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮಗನ ನರಕಯಾತನೆಗೆ ಮುಕ್ತಿ ಕೊಟ್ಟು, ಆತ್ಮಹತ್ಯೆಗೆ ಶರಣಾದ ತಾಯಿ!

ಅನಾರೋಗ್ಯದಿಂದ ಬಳಲುತ್ತಿದ್ದ ಮಗನಿಗೆ ನೇಣು ಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್ ನಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಗನಿಗೆ ನೇಣು ಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಟರಾಯನಪುರ ಬಳಿಯ ಕವಿಕಾ ಲೇಔಟ್ ನಲ್ಲಿ ಮಂಗಳವಾರ ರಾತ್ರಿ ವರದಿಯಾಗಿದೆ.
 
ತಾಯಿ ಶಶಿಕಲಾ (43) ಮತ್ತು ಮಗ ಹೇಮಾಂದ್ರಿ (11) ಮೃತ ದುರ್ದೈವಿಗಳು. ಮಗನ ಅನಾರೋಗ್ಯ ಹಿನ್ನೆಲೆಯಲ್ಲಿ ತಾಯಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಶಶಿಕಲಾ ಅವರ ಮಗನಿಗೆ ಹುಟ್ಟಿನಿಂದಲೂ ಮೂರ್ಛೆ ರೋಗವಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಿರಲಿಲ್ಲ.  ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬೇಕು ಎನ್ನಲಾಗಿದೆ.

ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!