ಬಸವನಪುರದ ಮಂಜುಳಾ 
ರಾಜ್ಯ

ಬೆಂಗಳೂರು: ಚೀಟಿ ವ್ಯವಹಾರದ ಹೆಸರಿನಲ್ಲಿ 8 ಕೋಟಿ ರೂ ವಂಚಿಸಿ ಮಹಿಳೆ ಪರಾರಿ

ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯೊಬ್ಬಳು 8 ಕೋಟಿ ರೂ ವಂಚಿಸಿ ಪರಾರಿಯಾಗಿರುವ ಘಟನೆ ಬಸವನಪುರದಲ್ಲಿ ನಡೆದಿದೆ.

ಬೆಂಗಳೂರು: ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯೊಬ್ಬಳು 8 ಕೋಟಿ ರೂ ವಂಚಿಸಿ ಪರಾರಿಯಾಗಿರುವ ಘಟನೆ ಬಸವನಪುರದಲ್ಲಿ ನಡೆದಿದೆ.

ಹಲವು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದ ಬಸವನಪುರದ ಮಂಜುಳಾ ಎಂಬ ಮಹಿಳೆ, ಸುಮಾರು ನೂರಕ್ಕೂ ಹೆಚ್ಚು ಜನರ ಬಳಿ 8 ಕೋಟಿ ರೂಕ್ಕಿಂತ ಅಧಿಕ ಹಣ ಚೀಟಿ ಕಟ್ಟಿಸಿಕೊಂಡು ಪರಾರಿಯಾಗಿದ್ದಾಳೆ.

ಮಂಜುಳಾ, ಮೊದಲು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಬಳಿಕ ಚೀಟಿ ವ್ಯವಹಾರ ಆರಂಭಿಸಿ ಮೊದಲು ಗಾರ್ಮೆಂಟ್ಸ್ ನಲ್ಲಿ ಪರಿಚಯವಿದ್ದ ಮಹಿಳೆಯರಿಂದ ಚೀಟಿ ಹಾಕಿಸಿಕೊಂಡಿದ್ದಳು.

ಮೊದ  ಮೊದಲು ಚೀಟಿ ಹಣವನ್ನು ಕಾಲ ಕಾಲಕ್ಕೆ ನೀಡುವ ಮೂಲಕ ಜನರ ವಿಶ್ವಾಸವನ್ನು  ಗಳಿಸಿಕೊಂಡಿದ್ದಳು. ಹೀಗಾಗಿ ಹೆಚ್ಚಾಗಿ ಗಾರ್ಮೆಂಟ್ಸ್ ನೌಕರರು, ಆಟೋ ಡ್ರೈವರ್,  ದಿನಗೂಲಿ ನೌಕರರು ಚೀಟಿ ಹಾಕಿದ್ದರು ಎಂದು ತಿಳಿದು ಬಂದಿದೆ.

ಮಂಜುಳಾ  ತಾನು ಖರೀದಿಸಿದ್ದ ಮನೆಯನ್ನೂ ಮಾರಿಕೊಂಡು  ಪರಾರಿಯಾಗಿದ್ದಾಳೆ. ಈ ಹಿನ್ನಲೆಯಲ್ಲಿ  ವಂಚನೆಗೊಳಗಾದವರು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಂಜುಳಾ ವಿರುದ್ಧ ದೂರು  ದಾಖಲಿಸಿಕೊಂಡು.

ಸದ್ಯ ಪೊಲೀಸರು ಮಂಜುಳಾ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!