ಶಾಸಕ ಬಿ ಶ್ರೀರಾಮುಲು 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ, ಇದುವರೆಗೆ 72,542 ಪ್ರಯಾಣಿಕರ ತಪಾಸಣೆ: ಶ್ರೀರಾಮುಲು

ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್‌-19 ಪ್ರಕರಣ ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಅವರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್‌-19 ಪ್ರಕರಣ ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಅವರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಈವರೆಗೆ 72,542 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರಿನ ವಿವಿಧ ಮಾಲ್ ಹಾಗೂ ಕ್ಲಬ್ ಗಳಲ್ಲಿ ಮುಂಜಾಗ್ರತಾ ಕ್ರಮಗಳು ಹಾಗೂ ಅರಿವು ಮೂಡಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಘಗಳ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿ, ನಿರ್ದೇಶನ ನೀಡಲಾಗಿದೆ. ಹಳ್ಳಿಗಳಲ್ಲಿ ಈ ಸೋಂಕಿನ ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು