ಸಿದ್ದರಾಮಯ್ಯ 
ರಾಜ್ಯ

ಜಾತಿ ವ್ಯವಸ್ಥೆ ಇರುವ ತನಕ ಮೀಸಲಾತಿ ಇರಲೇಬೇಕು: ಸಿದ್ದರಾಮಯ್ಯ

ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂಬ ಅಂಬೇಡ್ಕರ್ ನಿರೀಕ್ಷೆ ಈಡೇರಿಲ್ಲ. ಆದರೆ ಜಾತಿ ವ್ಯವಸ್ಥೆ ಮಾತ್ರ ಉಳಿದಿದ್ದು, ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂಬ ಅಂಬೇಡ್ಕರ್ ನಿರೀಕ್ಷೆ ಈಡೇರಿಲ್ಲ. ಆದರೆ ಜಾತಿ ವ್ಯವಸ್ಥೆ ಮಾತ್ರ ಉಳಿದಿದ್ದು, ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಇರಲೇಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಾದ ಹತ್ತು ವರ್ಷಗಳಲ್ಲಿ ತಳಸಮುದಾಯಗಳಿಗೆ ರಾಜಕೀಯ, ಸಾಮಾಜಿಕ, ಆರ್ಥಿಕ ನ್ಯಾಯ ದೊರೆಯುತ್ತದೆ ಎಂದು ಅಂಬೇಡ್ಕರ್ ಅವರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರ ನಿರೀಕ್ಷೆ ಈಡೇರಲಿಲ್ಲ ಎಂದರು.

ಆದರೆ ಅಂಬೇಡ್ಕರ್ ಅವರೇ ಒಂದು ಕಡೆ,ಎಲ್ಲಿಯವರೆಗೆ ಈ ದೇಶದಲ್ಲಿ ಜಾತಿಯ ವ್ಯವಸ್ಥೆ ಇರುತ್ತದೋ?ಅಲ್ಲಿಯವರೆಗೆ ಮೀಸಲಾತಿಯ ಅಗತ್ಯವೂ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಮೀಸಲಾತಿ ಸೌಲಭ್ಯವನ್ನು ಒದಗಿಸಲೇಬೇಕಾದ ಸ್ಥಿತಿ ಇದೆ ಎಂದರು.

ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಂವಿಧಾನದ ಆಶಯದಂತೆ ಈ ದೇಶದಲ್ಲಿ ರಾಜಕೀಯ ನ್ಯಾಯ ಒಂದು ಮಟ್ಟದಲ್ಲಾದರೂ ಸಿಕ್ಕಿದೆ. ಇದರ ಫಲವಾಗಿ ಎಲ್ಲ ಸಾಂವಿಧಾನಿಕ ಸಂಸ್ಥೆಗಳಲ್ಲಿ ಪರಿಶಿಷ್ಟರು ಆಯ್ಕೆಯಾಗಿ ಬರುತ್ತಿದ್ದಾರೆ. ಹೀಗೆ ಶೋಷಿತರಿಗೆ ರಾಜಕೀಯ ನ್ಯಾಯ ಸಿಕ್ಕಿದರೂ ಸಾಮಾಜಿಕ, ಆರ್ಥಿಕ ನ್ಯಾಯ ಸಿಕ್ಕಿಲ್ಲ. ಎಲ್ಲಿಯವರೆಗೆ ಇದು ಸಿಗುವುದಿಲ್ಲವೋ? ಅಲ್ಲಿಯವರೆಗೆ ಸಂವಿಧಾನದ ಆಶಯಗಳು ಪೂರ್ಣವಾಗಿ ಈಡೇರಿದಂತಾಗುವುದಿಲ್ಲ ಎಂದರು. 

ಇವತ್ತಿಗೂ ಈ ದೇಶದ ಶೇಕಡಾ ಎಪ್ಪತ್ತರಷ್ಟು ಹಳ್ಳಿಗಳಲ್ಲಿ ಜಾತಿ ವ್ಯವಸ್ಥೆ ಉಳಿದಿದೆ.ಇದು ನಿವಾರಣೆಯಾಗಬೇಕು.ಹಾಗೆಯೇ ಮೀಸಲಾತಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ.ಇದು ಬೇಕಿಲ್ಲ ಎಂದು ಹೇಳಿದರು.

ಈ ಹಂತದಲ್ಲಿ ಮಾತನಾಡಿದ ಶಾಸಕರಾದ ಅನ್ನದಾನಿ,ಶ್ರೀನಿವಾಸಗೌಡ ಸೇರಿದಂತೆ ಹಲವರು,ಸಂವಿಧಾನ ರಚನೆಯ ನಂತರ ಜಾತಿ ಎಂಬುದು ಕ್ರಮೇಣ ಕಡಿಮೆಯಾಗುತ್ತಿದ್ದರೂ ಅದರ ಹಾವಳಿ ನಿಂತಿಲ್ಲ ಎಂದು ವಿಷಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel