ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ (ನ್ಯೂಸ್ ಕನ್ನಡ ಚಿತ್ರ) 
ರಾಜ್ಯ

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥ ನಾರಾಯಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆಯಿತು.

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರೆಯಿತು.

 ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನವನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ  ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು. ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು.

ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು.  ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು  ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ಪತ್ರಕರ್ತರು ರಾಜಕೀಯ ಸುದ್ದಿ ಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ವಾಗುವುದಿಲ್ಲ. ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆ ಯಲ್ಲಿ ಪತ್ರಕರ್ತರು ವ್ರತ್ತಿಪರ ಮೌಲ್ಯ ವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಇಂತಹ ಪತ್ರಕರ್ತರ ಸಂಘ ಟ್ರಸ್ಟ್ ಕಾಯಿದೆ ಗೊಳಪಟ್ಟರೆ ನೈತಿಕ ಸ್ಥೈರ್ಯ ವನ್ನು ಇನ್ನಷ್ಟು ಬಲಗೊಳಿಸಬಹು ಎಂದವರು ಅಭಿಪ್ರಾಯಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು  ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ,  ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್,  ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ,  ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,  ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ  ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT