ರಾಜ್ಯ

14 ದಿನಗಳ ನ್ಯಾಯಾಂಗ ಬಂಧನಕ್ಕೆ ರವಿ ಪೂಜಾರಿ

Nagaraja AB

ಬೆಂಗಳೂರು: ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ತನಿಖೆ ನಡೆಸಲು ಬಾಡಿ ವಾರಂಟ್‌ ಆಧಾರದ ಮೇಲೆ  ಆತನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ.

ಆಗ್ನೇಯ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ನೇತೃತ್ವದಲ್ಲಿ ರಚಿಸಲಾದ ತಂಡವು ಪೂಜಾರಿಯನ್ನು ವಿಚಾರಣೆ ನಡೆಸುತ್ತಿದೆ.

ಪೂಜಾರಿ ಸಹಚರರು ಶಾಬ್ನಾಮ್ ಡೆವಲಪರ್ಸ್‌ನ ನೌಕರರಾದ  ಶೈಲಾಜಾ ಮತ್ತು ಚಾಲಕ ರವಿ ಅವರ ಮೇಲೆ ಗುಂಡು ಹಾರಿಸಿ ಕೊಂದಿದ್ದರು.

ಪೂಜಾರಿ ತನಿಖೆಗೆ ಸಹಕರಿಸುತ್ತಿದ್ದಾನೆ. ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಎರಡು ಪ್ರಕರಣಗಳ ತನಿಖೆ ನಂತರ ಪೂಜಾರಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ನಂತರ ಮತ್ತೆ 2001ರಲ್ಲಿ ವೈಯಾಲಿಕಾವಲ್ ನಲ್ಲಿ ನಡೆದಿದ್ದ ಸುಬ್ಬರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯಾದ್ಯಂತ 97 ಕೇಸ್ ಗಳಲ್ಲಿ ಪೂಜಾರಿ ಭಾಗಿಯಾಗಿದ್ದು, 47 ಕೇಸ್ ಗಳು ಬೆಂಗಳೂರು ಒಂದರಲ್ಲಿಯೇ ದಾಖಲಾಗಿವೆ.

SCROLL FOR NEXT