ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ತುಂಡಾದ ವ್ಯಕ್ತಿಯ ಕಾಲು!
ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡುಗೋಡಿಯ ಬಳಿ ಸಂಭವಿಸಿದ ಘಟನೆಯ ಇದಾಗಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡುಗೋಡಿಯ ಬಳಿ ಸಂಭವಿಸಿದ ಘಟನೆಯ ಇದಾಗಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ.
ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಗಾಯಾಳುವನ್ನು 50 ವರ್ಷದ ನರಸಿಂಹಯ್ಯ ಎಂದು ಗುರಿತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು ಕೆಮಿಕಲ್ ರಿಯಾಕ್ಷನ್ ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.