ಕೊರೋನಾ ಭೀತಿ: ನಾಳೆಯಿಂದ ಬೆಂಗಳೂರಿನ LKG, UKG ಶಾಲೆಗಳಿಗೆ ರಜೆ
ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್ಕೆಜಿ, ಯುಕೆಜಿ) ಗಳಿಗೆ ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಬೆಂಗಳೂರು: ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್ಕೆಜಿ, ಯುಕೆಜಿ) ಗಳಿಗೆ ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಮೂರು ಜಿಲ್ಲೆಯ ಸರ್ಕಾರಿ, ಅನುದಾನಿತ ಃಆಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ಕೆಜಿ, ಹಾಗೂಯುಕೆಜಿಗಳಿಗೆ ಮುಂಜಾಗ್ರತಿ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ..
"ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ LKG, UKG ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ." ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ನಲ್ಲಿ ಬರೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.