ಸಾಂದರ್ಭಿಕ ಚಿತ್ರ 
ರಾಜ್ಯ

ಮಸಾಜ್‌ ಕೇಂದ್ರದ ಮೇಲೆ ಸಿಸಿಬಿ ದಾಳಿ: 61 ಜನರ ಬಂಧನ

12 ಸ್ಪಾ ಮಸಾಜ್ ಪಾರ್ಲರ್,7 ವೇಶ್ಯಾವಾಟಿಕೆ ಗೃಹಗಳ‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 61ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: 12 ಸ್ಪಾ ಮಸಾಜ್ ಪಾರ್ಲರ್,7 ವೇಶ್ಯಾವಾಟಿಕೆ ಗೃಹಗಳ‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 61ಜನರನ್ನು ಬಂಧಿಸಿದ್ದಾರೆ.

ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ದಾಳಿಯ ಸಂದರ್ಭದಲ್ಲಿ ಪೊಲೀಸರು 69 ಯುವತಿಯರನ್ನು ರಕ್ಷಿಸಿದ್ದಾರೆ.

ಪ್ರಸ್ತುತ ಸಾಲಿನಲ್ಲಿ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ, ಮಸಾಜ್ ಪಾರ್ಲರ್‌ ಹಾಗೂ ಲಾಡ್ಜ್ ಮೇಲೆ ದಾಳಿ ನಡೆಸಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ರಾಜ್ ಕುಮಾರ್, ರಘು, ಭರತ್, ಗೋಪಿ, ಆನಂದ್,  ಕುಮಾರ್, ಪ್ರಜ್ವಲ್, ಸಂಧ್ಯಾ, ಸ್ವಾತಿ ಸೇರಿ 61ಜನ ಬಂಧಿತ ಆರೋಪಿಗಳು.

ಬಂಧಿತರು  ನಗರದ ಎಚ್ ಎಸ್ ಆರ್ ಲೇಔಟ್, ಕೆಂಗೇರಿ, ಹೆಬ್ಬಾಳ, ಮಾಗಡಿ ರಸ್ತೆ, ಹೂಡಿ ವೃತ್ತ,  ಬಾಣಸವಾಡಿ ಸುತ್ತಮುತ್ತ ಪ್ರದೇಶಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು  ಪೊಲೀಸರು ತಿಳಿಸಿದ್ದಾರೆ .

ನಗರ  ಅಪರ  ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್  ಆರ್ ಜೈನ್, ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಂ ಆರ್ ಮುದವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT