ರಾಜ್ಯ

ಮಹಿಳಾ ಮೀಸಲಾತಿಗೆ ಆಗ್ರಹಿಸಿ ಶೀಘ್ರವೇ ದೆಹಲಿಯಲ್ಲಿ ಧರಣಿ: ದೇವೇಗೌಡ

Shilpa D

ಬೆಂಗಳೂರು:  ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವಂತೆ ಆಗ್ರಹಿಸಿ ಶೀಘ್ರವೇ ದೆಹಲಿಯ ಜಂತರ್ ಮಂಥರ್ ನಲ್ಲಿ ಧರಣಿ ಆರಂಭಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಮಹಿಳಾ ದಿನಾಚರಣೆ ಅಂಗವಾಗಿ ಜೆಡಿಎಸ್  ಬೆಳಗಾವಿಯಲ್ಲಿ ಮಹಿಳಾ ಘಟಕವು  ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘1996ರಲ್ಲಿ ನಾನು ಪ್ರಧಾನಿಯಾದ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಗಾಗಿ ಮಸೂದೆ ಮಂಡಿಸಿದ್ದೆ’ ಎಂದರು.

ಮಹಿಳಾ ಮೀಸಲಾತಿ ಮಸೂದೆ ಜಾರಿಗಾಗಿ ಒತ್ತಾಯಿಸಿ  ವಿವಿಧ ಪಕ್ಷಗಳು ಒಗ್ಗೂಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ, ಆದರೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ. 

ಮಹಿಳಾ ಮೀಸಲಾತಿ ಮಸೂದೆ’ಯನ್ನು ಜಾರಿ ಮಾಡಲು ಪ್ರಧಾನಿ ಮೋದಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

SCROLL FOR NEXT