ಅಣ್ಣಾಮಲೈ ನಂತರ ಮತ್ತೊಬ್ಬ ಐಪಿಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!
ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.
'ಕರ್ನಾಟಕದ ಸಿಂಗಂ' ಎಂದೇ ಹೆಸರಾಗಿದ್ದ ಪೊಲೀಸ್ ಅಧಿಕಾರಿ ಅಣ್ಣಾಮಲೈ ಕಳೆದ ವರ್ಷ ಮೇ ತಿಂಗಳಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ್ದರು.
ಇದೀಗ ಕರ್ನಾಟಕ ರಾಜ್ಯ ಗಣಕ ಪರಿಷತ್ ಎಡಿಜಿಪಿಯಾಗಿರುವ ಸಂಜಯ್ ಸಹಾಯ್ ಸ್ವಯಂನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅನುಮತಿ ಕೂಡ ನೀಡಿದೆ. ಮಾ. 31ರವರೆಗೆಸಂಜಯ್ ಸಹಾಯ್ ಕರ್ತವ್ಯ ನಿರ್ವಹಿಸಲಿದ್ದಾರೆ.
ರಾಜ್ಯ ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿ ಆಗಿರುವ ಸಂಜಯ್ ಸಹಾಯ್ 1989ರ ಬ್ಯಾಚ್ನ ಐಪಿಎಸ್ ಅಧಿಕಾರಿ. ಇವರ ಸ್ವಯಂ ನಿವೃತ್ತಿಯ ನಿರ್ಧಾರಕ್ಕೆ ಕಲಂ 16(2) DCRB ನಿಯಮದಂತೆ ರಾಜ್ಯ ಸರ್ಕಾರ ಅನುಮತಿ ನೀಡಿ, ಆದೇಶ ಹೊರಡಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.