ರಾಜ್ಯ

ಬೆಂಗಳೂರಿನ ರಸ್ತೆ ಬದಿ ಆಹಾರ ಮಾರಾಟಕ್ಕೆ ನಿರ್ಬಂಧ ಹೇರಿದ ರಾಜ್ಯ ಸರ್ಕಾರ

Manjula VN

ಬೆಂಗಳೂರು: ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ನಗರದಲ್ಲಿ ಕಾಲರಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟಕ್ಕೆ ನಿರ್ಬಂಧ ಹೇರಿದೆ. 

ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕಾಲರಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದ್ದು, ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಈಗಾಗಲೇ ಬಿಬಿಎಂಪಿ ಕೂಡ ರಸ್ತೆ ಬದಿಯ ಆಹಾರ ಪದಾರ್ಥ ಮಾರಾಟಕ್ಕೆ ನಿರ್ಬಂಧ ಹೇರಿ, ತೆರವುಗೊಳಿಸಲು ಆರಂಭಿಸಿದೆ. 

ಕಾಲರ ಮತ್ತು ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಯಲು ಬೆಂಗಳೂರು ಮಹಾನಗರ ‌ಪಾಲಿಕೆಯು ರಸ್ತೆ ಬದಿ ಆಹಾರ ಪದಾರ್ಥ ಮಾರಾಟ ಮಾಡುವುದನ್ನು ನಿರ್ಬಂಧಿಸಿ, ತೆರವುಗೊಳಿಸುತ್ತಿದೆ.‌ ನೈರ್ಮಲ್ಯದ ಕೊರತೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿ‌ ಮಾರಲ್ಪಡುವ ಆಹಾರಗಳನ್ನು ಸೇವಿಸದಂತೆ ಈ ಮೂಲಕ ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ. 

SCROLL FOR NEXT