ಶಾಲಾ ಮಕ್ಕಳ ಚಿತ್ರ 
ರಾಜ್ಯ

ಬೆಂಗಳೂರು,ಬೆಂ.ಗ್ರಾಂ ಜಿಲ್ಲೆಗಳ 1-6ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ!  

ರಾಜ್ಯದಲ್ಲೂ ಕೊರೋನಾ ವೈರಾಣು ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿವರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. 

ಬೆಂಗಳೂರು: ರಾಜ್ಯದಲ್ಲೂ ಕೊರೋನಾ ವೈರಾಣು ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿವರೆಗೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. 

ಈ ಸಂಬಂಧ ಶಿಕ್ಷಣ ಇಲಾಖೆ ಸುತ್ತೋಲೆ  ಹೊರಡಿಸಿದ್ದು, 7ರಿಂದ 9ನೇ ತರಗತಿವರೆಗೆ ಮಾರ್ಚ್ 23ರ ಒಳಗೆ ಪರೀಕ್ಷೆ ನಡೆಸಬೇಕು, ಆ ಬಳಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ರಜೆ ನೀಡಬೇಕು. 10ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಗೊಳಿಸಿರುವ ದಿನಾಂಕದಂದೆ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. 

ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಛಿಸಿದರೆ ಅವರಿಗೆ ಅನುಮತಿ ನೀಡಬೇಕು. ಹಾಗೆಯೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಲೆಯ ಮುಖ್ಯಸ್ಥರುಗಳಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. 

ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ಪೂರ್ವ ಪ್ರಾಥಮಿಕ, ಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಮಾರ್ಚ್ 9ರಿಂದಲೇ ರಜೆ ಘೋಷಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ