ಚರಣ್ ರೆಡ್ಡಿ 
ರಾಜ್ಯ

ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಚರಣ್ ರೆಡ್ಡಿ ನಿಧನ

ಸಿಐಡಿ ಎಡಿಜಿಪಿಯಾಗಿದ್ದ ಹಿರಿಯ ಐಪಿಎಸ್​ ಅಧಿಕಾರಿ ಚರಣ್​​ ರೆಡ್ಡಿ(56) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬೆಂಗಳೂರು: ಸಿಐಡಿ ಎಡಿಜಿಪಿಯಾಗಿದ್ದ ಹಿರಿಯ ಐಪಿಎಸ್​ ಅಧಿಕಾರಿ ಚರಣ್​​ ರೆಡ್ಡಿ(56) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಆಂಧ್ರ ಪ್ರದೇಶದವರಾದ ಚರಣ್​ ರೆಡ್ಡಿ 1993ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲೋಕಾಯುಕ್ತ ಎಸ್.ಐ.ಟಿ. ಮುಖ್ಯಸ್ಥರಾಗಿದ್ದರು. ಐದು ವರ್ಷಗಳ ಕಾಲ ಸಿಬಿಐನಲ್ಲೂ ಕೆಲಸ ಮಾಡಿದ್ದರು. ಸದ್ಯ ಸಿಐಡಿ ಎಡಿಜಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕೆಲ ಹೊತ್ತಿನಲ್ಲಿ ಸಂಜಯ ನಗರದ ಮನೆಗೆ ಅವರ ಪಾರ್ಥಿವ ಶರೀರ ರವಾನೆಯಾಗಲಿದ್ದು, ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಚರಣ್ ರೆಡ್ಡಿ ನಿಧನದ ಹಿನ್ನೆಲೆ ಇಂದು ವನಿತಾ ಸಹಾಯವಾಣಿ ವತಿಯಿಂದ ನಡೆಯಬೇಕಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

IPL 2026 Playoffs Scenarios: ಅಗ್ರಸ್ಥಾನದಲ್ಲಿ ಆರ್ ಸಿಬಿ, 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಅಪ್ಪಚ್ಚಿ: ಪ್ರವಾಸಿಗರಿಗೆ ದುಬಾರೆ ಕ್ಯಾಂಪ್ ನಿರ್ಬಂಧ!

SCROLL FOR NEXT