ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕರೋನಾಗೆ ಮೊದಲ ಬಲಿ; 1ರಿಂದ 10ನೇ ತರಗತಿ ನಡೆಸದಂತೆ ಡಿಡಿಪಿಐ ಸೂಚನೆ

ಕರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿ‌ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. 

ಕಲಬುರಗಿ: ಕರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿ‌ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. 

ಜಿಲ್ಲೆಯಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಸದಂತೆ ಡಿಡಿಪಿಐ ಎಸ್ ಬಿ ಬಾಡಂಗಡಿ ಶಿಕ್ಷಕರಿಗೆ ಸೂಚಿಸಿದ್ದಾರೆ.

ಪರೀಕ್ಷೆಗಳಿದ್ದರೇ, ಬೇಗ ಮುಗಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ, 10ನೇ ತರಗತಿಯ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕಿಲ್ಲ. ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಮಾಲ್, ಚಿತ್ರಮಂದಿರ ತೆರೆಯದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ. ಅಲ್ಲದೇ, ಜನರು ಗುಂಪು ಗುಂಪಾಗಿ ಸೇರದಂತೆಯೂ ನಿಗಾವಹಿಸಲಾಗಿದೆ ಎಂದು ಹೇಳಿದ್ದಾರೆ.

ಉಮ್ರಾ ತೀರ್ಥ ಯಾತ್ರೆ ಮುಗಿಸಿಕೊಂಡು ಫೆ. 29 ರಂದು 76 ವರ್ಷದ ವೃದ್ಧ ಸೌದಿ ಅರೇಬಿಯಾದಿಂದ ಕಲಬುರಗಿಗೆ ಬಂದಿದ್ದರು. 

ನಂತರ, ಮಾರ್ಚ್ 5 ರಂದು ಅವರಲ್ಲಿ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರಿಗೆ ಕೊರೊನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೃದ್ಧನ ಗಂಟಲು ದ್ರವ ಸಂಗ್ರಹಿಸಿ, ವೈದ್ಯರು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ ಕಳುಹಿಸಿದ್ದರು.

ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಕುಟುಂಬ ಸದಸ್ಯರು ವೃದ್ಧನನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಇನ್ನು ವೈದ್ಯಕೀಯ ವರದಿ ಬರುವ ಮುನ್ನವೇ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ವೃದ್ಧ ಕರೊನಾ ವೈರಸ್ ಗೆ ಬಲಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಗುರುವಾರ ರಾತ್ರಿ ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!