ಯಡಿಯೂರಪ್ಪ 
ರಾಜ್ಯ

ಎಲ್ಲಾ ಜಿಲ್ಲೆಯಲ್ಲೂ ಕೊರೋನಾ ಲ್ಯಾಬ್: ಸಿಎಂ ಯಡಿಯೂರಪ್ಪ

ದೇಶದಲ್ಲೇ ಕೊರೋನಾಗೆ ಮೊದಲ ಬಲಿ ನಮ್ಮ ರಾಜ್ಯದಲ್ಲಿ ಆಗಿರುವುದಕ್ಕೆ ತಲೆ ತಗ್ಗಿಸುವಂತಾಗಿದೆ. ಕಲಬುರಗಿ ಪ್ರಕರಣ ಸೇರಿದಂತೆ ರಾಜ್ಯದಾದ್ಯಂತ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮವನ್ನೂ ಕೈಗೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಲ್ಲೂ ಪ್ರಯೋಗಾಲಯ ಮಾಡುತ್ತೇವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ದೇಶದಲ್ಲೇ ಕೊರೋನಾಗೆ ಮೊದಲ ಬಲಿ ನಮ್ಮ ರಾಜ್ಯದಲ್ಲಿ ಆಗಿರುವುದಕ್ಕೆ ತಲೆ ತಗ್ಗಿಸುವಂತಾಗಿದೆ. ಕಲಬುರಗಿ ಪ್ರಕರಣ ಸೇರಿದಂತೆ ರಾಜ್ಯದಾದ್ಯಂತ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮವನ್ನೂ ಕೈಗೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಲ್ಲೂ ಪ್ರಯೋಗಾಲಯ ಮಾಡುತ್ತೇವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಕೊರೋನಾ ಬಗೆಗಿನ ಆರೋಗ್ಯ ಸಚಿವ ಶ್ರೀರಾಮುಲು ಉತ್ತರಕ್ಕೆ ಪೂರಕವಾಗಿ ಮಾತನಾಡಿದ ಅವರು, ಸೋಂಕು ಹರಡುವುದನ್ನು ತಡೆಗಟ್ಟಲು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬೀಳುವುದಿಲ್ಲ. ದುಬಾರಿ ಬೆಲೆಗೆ ಮಾಸ್ಕ್ ಮತ್ತಿತರ ವೈದ್ಯಕೀಯ ವಸ್ತುಗಳನ್ನು ಮಾರಾಟ ಮಾಡುವ ಔಷಧಿ ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗುವುದು. ಆರೋಗ್ಯ ಸಚಿವರು ತಜ್ಞ ವೈದ್ಯರೊಂದಿಗೆ ಕಲಬುರಗಿಗೆ ಭೇಟಿ ನೀಡಿ ಅಗತ್ಯ ಕ್ರಮಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 

ಬಳಿಕ ಮಾತನಾಡಿದ ಶ್ರೀರಾಮುಲು ಅವರು, ಕಲಬುರಗಿಯಲ್ಲಿ ಸೋಂಕು ಹರಡದಂತೆ ತಡೆಯಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗಳ್ಳಲಾಗಿದೆ. ಸೋಂಕು ಪೀಡಿತ ವ್ಯಕ್ತಿ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿದ ಮಾಹಿತಿ ತಿಳಿದಿರಲಿಲ್ಲ. ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆಯೇ ವ್ಯಕ್ತಿಯ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ. ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಕುಟುಂಬ ಸದಸ್ಯರ ಜೊತೆಗೆ ಇತರೆ 25 ಮಂದಿಯನ್ನು ವಿಶೇಷ ಕೊಠಡಿಯಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT