ರಾಜ್ಯ

ಕೋರೋನಾ ಭೀತಿ: ಬೆಂಗಳೂರಿನಲ್ಲಿ ನಾಳೆ ಆರಂಭವಾಗಬೇಕಿದ್ದ ಆರ್ ಎಸ್ಎಸ್ ಸಭೆ ರದ್ದು 

ನಾಳೆ ಆರಂಭವಾಗಬೇಕಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್)ದ ಮೂರು ದಿನಗಳ ವಾರ್ಷಿಕ ಸಭೆಯನ್ನು ಕೊರೋನಾ ವೈರಸ್ ಸೋಂಕು ಪಸರಿಸುವ ಗಂಭೀರ ಸಮಸ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. 

ನವದೆಹಲಿ: ನಾಳೆ ಆರಂಭವಾಗಬೇಕಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್)ದ ಮೂರು ದಿನಗಳ ವಾರ್ಷಿಕ ಸಭೆಯನ್ನು ಕೊರೋನಾ ವೈರಸ್ ಸೋಂಕು ಪಸರಿಸುವ ಗಂಭೀರ ಸಮಸ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. 

ಅಖಿಲ ಭಾರತೀಯ ಪ್ರತಿನಿಧಿ ಸಭಾ(ಎಬಿಪಿಎಸ್) ವಾರ್ಷಿಕ ಸಭೆ ನಾಳೆಯಿಂದ 17ರವರೆಗೆ ಆಯೋಜಿಸಲಾಗಿತ್ತು. ಸಂಘಟನೆಯ ಮುಂದಿನ ಕ್ರಮಗಳ ಕುರಿತು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೀಲನಕ್ಷೆ ತಯಾರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಿತ್ತು. 


ಆದರೆ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಒಂದು ವಾರಗಳ ಕಾಲ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಕೂಡ ರದ್ದಾಗಿದೆ ಎಂದು ಆರ್ ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಷಿ ತಿಳಿಸಿದ್ದಾರೆ.

ಆರ್ ಎಸ್ಎಸ್ ಕಾರ್ಯಕ್ರಮ ರದ್ದುಪಡಿಸುವಂತೆ ಇದಕ್ಕೂ ಮುನ್ನ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!