ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತರ ಪ್ರದೇಶ: ನಕಲಿ ಕೈ ಸ್ಯಾನಿಟೈಸರ್, ಮಾಸ್ಕ್ ಕಾರ್ಖಾನೆ ಪತ್ತೆ

ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳು ಅತ್ಯವಶ್ಯಕ ಸರಕುಗಳು ಎಂದು ಕೇಂದ್ರ ಸರ್ಕಾರ ಘೋಷಿಸಿದ ಮಾರನೇ ದಿನವೇ  ಉತ್ತರ ಪ್ರದೇಶದ ನೊಯ್ಡಾದಲ್ಲಿ ನಕಲಿ ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಕಾರ್ಖಾನೆ ಪತ್ತೆಯಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನೊಯ್ಡಾ: ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳು ಅತ್ಯವಶ್ಯಕ ಸರಕುಗಳು ಎಂದು ಕೇಂದ್ರ ಸರ್ಕಾರ ಘೋಷಿಸಿದ ಮಾರನೇ ದಿನವೇ  ಉತ್ತರ ಪ್ರದೇಶದ ನೊಯ್ಡಾದಲ್ಲಿ ನಕಲಿ ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಕಾರ್ಖಾನೆ ಪತ್ತೆಯಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಮರ್ಷಿಯಲ್ ಹಬ್ ಸೆಕ್ಟರ್ 63ರಲ್ಲಿದ್ದ ಕಂಪನಿ ಮೇಲೆ ಇಂದು ಮಧ್ಯಾಹ್ನ 2-30ರ ಸುಮಾರಿನಲ್ಲಿ ದಾಳಿ ನಡೆಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್  ರಾಜೀವ್ ರೈ ಹೇಳಿದ್ದಾರೆ. 

ನಾಲ್ವರನ್ನು ಸ್ಥಳದಲ್ಲಿಯೇ ಬಂಧಿಸಲಾಗಿದ್ದು, ಸುಮಾರು 5 ಸಾವಿರ ಮುಖಕ್ಕೆ ಹಾಕುವ ಮಾಸ್ಕ್ ಗಳು ಹಾಗೂ 5 ಸಾವಿರ ಕೈ ಸ್ಯಾನಿಟೈಸರ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೈ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಎರಡು ವಸ್ತುಗಳು 'ಎಸ್‌ಜಿ ಗ್ರೂಪ್' ಎಂಬ  ಹೆಸರನ್ನು ಹೊಂದಿವೆ ಮತ್ತು ಅವು ಸುಮಾರು 10 ಲಕ್ಷ ರೂಪಾಯಿಗಳ ಮೌಲ್ಯವನ್ನು ಹೊಂದಿವೆ ಆದರೆ ಅವು ನಿಜವಾದ ಉತ್ಪನ್ನಗಳಲ್ಲ ಎಂದು ಅವರು ಹೇಳಿದ್ದಾರೆ.

ಮಾರಕ ಕೋವಿಡ್ -19 ಭೀತಿಯ ನಡುವೆ ನೊಯ್ಡಾ ಮತ್ತು ಗ್ರೇಟರ್ ನೊಯ್ಡಾದಲ್ಲಿ ಆರಂಭದಲ್ಲಿ ಕೈ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳ ಪೂರೈಕೆಯಲ್ಲಿ ಕೊರತೆಯಾಗುತ್ತಿದೆ ಎಂದು ಔಷಧಿ ವ್ಯಾಪಾರಿಗಳು ಹೇಳುತ್ತಿದ್ದರೆ ಈ ವಸ್ತುಗಳು ದೊರೆತರೂ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. 

ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳ ಮಾರಾಟದಲ್ಲಿ ಅಕ್ರಮ ಕಂಡುಬಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿ ಬಿಎನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?