ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ, ಯುವಕ ಸ್ಥಳದಲ್ಲೇ ಸಾವು
ವೇಗವಾಗಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ 19 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ವೇಗವಾಗಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ 19 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ರಾಜಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನಂದಿನಿ ಲೇಔಟ್ ಲಗ್ಗರೆ ಬಸ್ ನಿಲ್ದಾಣದ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ಮೃತನನ್ನು ಲಗ್ಗರೆಯ ಪ್ರೀತಿನಗರದ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.ರಾತ್ರಿ 9.15 ರ ಸುಮಾರಿಗೆ ವೆಂಕಟೇಶ್ ತನ್ನ ಸ್ನೇಹಿತ ಅಭಿಷೇಕ್ ಜೊತೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಹಿಂಭಾಗದಿಂದ ಬೈಕಿಗೆ ಗುದ್ದಿದೆ.
ಅಭಿಷೇಕ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರೆ ವೆಂಕಟೇಶ್ ಮಾತ್ರ ಲಾರಿ ಆತನ ಮೇಲೇರಿದ್ದ ಕಾರಣ ದುರ್ಮರಣಕ್ಕೀಡಾಗಿದ್ದಾರೆ.