ರಾಜ್ಯ

ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ

Nagaraja AB

ಬೆಂಗಳೂರು: ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ  ಈ ವಿಧೇಯಕಕ್ಕೆ ಸದನ ಧ್ವನಿ ಮತದ ಅಂಗೀಕಾರ ದೊರೆಯಿತು.

ಇದಕ್ಕೂ ಮುನ್ನಾ ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ,  ಲೋಕಾಯುಕ್ತರು ಅವರಾಗಿಯೇ ಯಾವುದೇ ಪ್ರಕರಣದ ವಿಚಾರಣೆ ಮಾಡಲಾಗುವುದಿಲ್ಲ ಎಂದಾಗ ಉಪ ಲೋಕಾಯುಕ್ತರಿಗೆ ವರ್ಗಾಯಿಸುವ ಅಧಿಕಾರ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ

ಲೋಕಾಯುಕ್ತರು ಸ್ವಂತ ಅಥವಾ ಬೇರೆ ಕಾರಣಗಳಿಂದ ಪ್ರಕರಣದ ವಿಚಾರಣೆಯಿಂದ ಸಾಧ್ಯವಾಗದ ಸಂದರ್ಭದಲ್ಲಿ ಉಪ ಲೋಕಾಯುಕ್ತರಿಗೆ ವರ್ಗಾವಣೆಯಾಗಲಿದೆ ಎಂದರು.

SCROLL FOR NEXT